ಬೀದರ್| ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಹೊಲಕ್ಕೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಬೀದರ್ : ಬಸವಕಲ್ಯಾಣ ತಾಲೂಕಿನ ಯರಬಾಗ ಗ್ರಾಮದ ರೈತ ಮಹಿಳೆ ಕಾಶಮ್ಮ ಅವರಿಗೆ ಸೇರಿದ ಜಮೀನಿನಲ್ಲಿ ಬೆಳೆದ ಕಬ್ಬು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂ. ನಷ್ಟವಾದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಯರಬಾಗದ ಗ್ರಾಮದ ಸುಮಾರು 1 ಎಕರೆಗಿಂತ ಹೆಚ್ಚು ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಯಲ್ಲಿ ಸುಟ್ಟು ಹೋಗಿದ್ದರಿಂದ ರೈತ ಕುಟುಂಬಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದ್ದು, ಸರಕಾರ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.
Next Story




