ಬೀದರ್ | ಜು.1ರಂದು ಜನವಾಡಾದಲ್ಲಿ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ

ಬೀದರ್ : ಜನವಾಡಾ ಗ್ರಾಮದ ನಾಡ ಕಚೇರಿ ಆವರಣದಲ್ಲಿ ಜು.1 ರ ಬೆಳಿಗ್ಗೆ 10.30 ಗಂಟೆಗೆ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜಂಟಿ ಉಪಸ್ಥಿತಿಯಲ್ಲಿ ಈ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಆದ ಕಾರಣ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಾರ್ಯಕ್ರಮಕ್ಕೆ ಸಮಯದ ಮುಂಚಿತವಾಗಿ ಬೆಳಿಗ್ಗೆ 10 ಗಂಟೆಯಿಂದ ತಮ್ಮ ಸಿಬ್ಬಂದಿಯೊಂದಿಗೆ ಹಾಜರಿದ್ದು, ಬಂದಿರುವ ಅಹವಾಲು ಸ್ವೀಕರಿಸಲು ಅವರು ಸೂಚಿಸಿದ್ದಾರೆ.
Next Story





