Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಭಾರತ ಸಂವಿಧಾನ ಇಡೀ ವಿಶ್ವಕ್ಕೆ...

Bidar | ಭಾರತ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ : ಡಿಸಿ ಶಿಲ್ಪಾ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ29 Oct 2026 5:58 PM IST
share
Bidar | ಭಾರತ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ : ಡಿಸಿ ಶಿಲ್ಪಾ ಶರ್ಮಾ

ಬೀದರ್: ಭಾರತದ ಸಂವಿಧಾನವು ಪ್ರಪಂಚದಲ್ಲಿಯೇ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ ವಿದ್ಯಾವಂತರು ಹಾಗೂ ಪುರುಷರಿಗೆ ಮಾತ್ರ ಮತದಾನದ ಹಕ್ಕು ನೀಡಲಾಗಿತ್ತು. ಆದರೆ, ಭಾರತದ ಸಂವಿಧಾನವು 18 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಮತದಾನದ ಹಕ್ಕನ್ನು ಕಲ್ಪಿಸಿದೆ. ನಮ್ಮ ಸಂವಿಧಾನವು ಅತ್ಯಂತ ಸುಂದರ, ಅಚ್ಚುಕಟ್ಟಾದ ಹಾಗೂ ಇಡೀ ಪ್ರಪಂಚಕ್ಕೆ ಮಾದರಿಯಾದ ಸಂವಿಧಾನವಾಗಿದೆ ಎಂದು ಹೇಳಿದರು.

ಸಂಸತ್ತಿನಲ್ಲಿ ನಡೆಯುವ ಅಧಿವೇಶನಗಳ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕಲಾಪಗಳಲ್ಲಿ ನಡೆಯುವ ಚರ್ಚೆಗಳು ಹಾಗೂ ಪ್ರಚಲಿತ ಸಮಸ್ಯೆಗಳ ಪರಿಹಾರಕ್ಕಾಗಿ ಮುಖ್ಯಮಂತ್ರಿ, ಸಚಿವರು, ಶಾಸಕರು ಮತ್ತು ವಿರೋಧ ಪಕ್ಷದ ನಾಯಕರ ನಡುವೆ ನಡೆಯುವ ಚರ್ಚೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ವಿದ್ಯಾರ್ಥಿಗಳ ಮೂಲಕವೇ ಯುವ ಸಂಸತ್ತು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಸದನದಲ್ಲಿ ನಡೆಯುವ ಕಾರ್ಯಕಲಾಪಗಳ ಕುರಿತು ವಿಸ್ತೃತವಾಗಿ ತಿಳಿದುಕೊಳ್ಳಬೇಕು. ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಇಂದಿನ ಯುವಕರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ವಾಕ್ಚಾತುರ್ಯ ಬೆಳೆಸಿಕೊಂಡರೆ ಮುಂದೊಂದು ದಿನ ಇಂತಹ ಕಲಾಪಗಳಲ್ಲಿ ಭಾಗವಹಿಸುವ ಅವಕಾಶವೂ ದೊರೆಯಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಮಾತನಾಡಿ, ಶಾಲಾ-ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಕುರಿತು ಹೆಚ್ಚಿನ ಮಾಹಿತಿ ಇರುವುದಿಲ್ಲ. ಸಂಸತ್ತಿನಲ್ಲಿ ನಡೆಯುವ ಕಾರ್ಯಕಲಾಪಗಳು, ಚರ್ಚೆಗಳು ಹಾಗೂ ಪ್ರಶ್ನೆಗಳಿಗೆ ಉತ್ತರಿಸುವ ಪ್ರಕ್ರಿಯೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿವಳಿಕೆ ಮೂಡಿಸುವುದು ಅವಶ್ಯಕವಾಗಿದೆ. ಈ ಉದ್ದೇಶದಿಂದ ಯುವ ಸಂಸತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಸಂವಿಧಾನದ ಅಂಗಗಳಾದ ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಹಾಗೂ ಮಾಧ್ಯಮಗಳ ಕುರಿತು ತಿಳಿವಳಿಕೆ ಮತ್ತು ಅನುಭವ ಪಡೆದುಕೊಳ್ಳಲು ಯುವ ಸಂಸತ್ತು ಮುಕ್ತ ಅವಕಾಶ ಕಲ್ಪಿಸುತ್ತದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಯುವ ಸಂಸತ್ತಿನ ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ಸಂಸತ್ ಸಭಾಧ್ಯಕ್ಷರನ್ನು ಆಯ್ಕೆ ಮಾಡಿದರು. ಕಲಾಪ ಆರಂಭಕ್ಕೂ ಮುನ್ನ ವಂದೇ ಮಾತರಂ ಗಾಯನ ಹಾಗೂ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು. ಬಳಿಕ ಪ್ರಶ್ನೋತ್ತರ, ಶೂನ್ಯವೇಳೆ, ಗಮನ ಸೆಳೆಯುವ ವಿಷಯಗಳು, ಮಸೂದೆಗಳ ಮಂಡನೆ ಹಾಗೂ ಚರ್ಚೆ ಸೇರಿದಂತೆ ವಿವಿಧ ಸಂಸದೀಯ ಕಾರ್ಯಕಲಾಪಗಳನ್ನು ನಡೆಸಲಾಯಿತು. ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಪ್ರಕ್ರಿಯೆಯನ್ನೂ ಪ್ರಾತ್ಯಕ್ಷಿಕೆಯ ಮೂಲಕ ನಡೆಸಿಕೊಡಲಾಯಿತು.

ಪ್ರಶ್ನೋತ್ತರ ಕಲಾಪದ ಆರಂಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅನುದಾನದ ಬಳಕೆ ಕುರಿತು ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ಸದಸ್ಯರ ಪಾತ್ರ ನಿರ್ವಹಿಸಿದ ವಿದ್ಯಾರ್ಥಿಗಳು ಚರ್ಚೆ ನಡೆಸಿದರು. ಪಂಚ ಗ್ಯಾರಂಟಿ ಯೋಜನೆಗಳು, ಗಡಿಭಾಗದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಸೌಕರ್ಯಗಳ ಕಲ್ಪನೆ, ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಹಾಗೂ ಕೆಪಿಎಸ್‌ಸಿ ನೇಮಕಾತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ಚರ್ಚೆ ನಡೆಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

ConstitutionBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X