Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಕಳ್ಳತನ ಪ್ರಕರಣ : 54 ಲಕ್ಷ 74...

Bidar | ಕಳ್ಳತನ ಪ್ರಕರಣ : 54 ಲಕ್ಷ 74 ಸಾವಿರದ ರೂ. ಮೌಲ್ಯದ ಸ್ವತ್ತು ಜಪ್ತಿ, ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ28 July 2026 5:09 PM IST
share
Bidar | ಕಳ್ಳತನ ಪ್ರಕರಣ : 54 ಲಕ್ಷ 74 ಸಾವಿರದ ರೂ. ಮೌಲ್ಯದ ಸ್ವತ್ತು ಜಪ್ತಿ, ಇಬ್ಬರ ಬಂಧನ

ಬೀದರ್: ಹುಮನಾಬಾದ್ ಪಟ್ಟಣದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಬೀದರ್ ಜಿಲ್ಲಾ ಪೊಲೀಸರು, ಚಿನ್ನ, ಬೆಳ್ಳಿ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರು ಸೇರಿದಂತೆ ಒಟ್ಟು 54 ಲಕ್ಷ 74 ಸಾವಿರ ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡು ಇಬ್ಬರು ಅಂತರ್‌ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.

ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಮನಾಬಾದ್ ಪಟ್ಟಣದ ಶಿವನಗರ ಕಾಲೋನಿಯಲ್ಲಿರುವ ಶಂಕರರಾವ್ ಅವರ ಮನೆಯ ಮೊದಲ ಮಹಡಿಯಲ್ಲಿ ಬಾಡಿಗೆಗೆ ನೀಡಿದ್ದ ಮೂರು ಮನೆಗಳು ಹಾಗೂ ಜಗನ್ನಾಥ್ ಪಾಟೀಲ್ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಬೀಗ ಮುರಿದು ಒಳನುಗ್ಗಿ ಚಿನ್ನ, ಬೆಳ್ಳಿ ಆಭರಣಗಳು ಮತ್ತು ನಗದು ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗಿತ್ತು ಎಂದು ತಿಳಿಸಿದರು.

ಪ್ರಕರಣದ ತನಿಖೆ ವೇಳೆ ಆರೋಪಿಗಳ ಬಗ್ಗೆ ಯಾವುದೇ ನೇರ ಸುಳಿವು ಲಭ್ಯವಾಗಿರಲಿಲ್ಲ. ಕಳ್ಳರು ಕೃತ್ಯದ ವೇಳೆ ಮಾಸ್ಕ್ ಧರಿಸಿದ್ದರಿಂದ ಸಿಸಿಟಿವಿ ದೃಶ್ಯಗಳಲ್ಲಿಯೂ ಸ್ಪಷ್ಟ ಗುರುತು ಸಿಗಲಿಲ್ಲ. ಒಂದೇ ಒಂದು ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದ್ದರೂ ಅದರ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚುವುದು ಕಷ್ಟಕರವಾಗಿತ್ತು. ಆದರೂ ತಾಂತ್ರಿಕ ತನಿಖೆ ಹಾಗೂ ಮಾಹಿತಿ ಸಂಗ್ರಹದ ಮೂಲಕ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‌ಪಿ ಹೇಳಿದರು.

ಬಂಧಿತ ಆರೋಪಿಗಳನ್ನು ವಿಜಯಪುರ ಮೂಲದ ಉಮೇಶ್ ಹಾಗೂ ಮಹಾರಾಷ್ಟ್ರದ ಸೋಲಾಪುರ ಮೂಲದ ಹುಸೇನಿ ಗಾಯಕ್ವಾಡ್ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 42.75 ಲಕ್ಷ ರೂ. ಮೌಲ್ಯದ 28.5 ತೊಲೆ ಚಿನ್ನಾಭರಣ, 44 ಸಾವಿರ ರೂ. ಮೌಲ್ಯದ 22 ತೊಲೆ ಬೆಳ್ಳಿ, 5.80 ಲಕ್ಷ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ 5.75 ಲಕ್ಷ ರೂ. ಮೌಲ್ಯದ ವಿಟಾರಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ 54.74 ಲಕ್ಷ ರೂ. ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ.

ಬಂಧಿತ ಆರೋಪಿಗಳ ವಿರುದ್ಧ ವಿಜಯಪುರ, ಕೊಪ್ಪಳ, ಕಲಬುರಗಿ, ಮಹಾರಾಷ್ಟ್ರದ ಪೂಣೆ, ಸೋಲಾಪುರ ಹಾಗೂ ತೆಲಂಗಾಣದ ಮೆಹಬೂಬ್‌ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಇವರು ಅಂತರ್‌ರಾಜ್ಯ ಮಟ್ಟದಲ್ಲಿ ಕಳ್ಳತನ ನಡೆಸುತ್ತಿದ್ದ ಆರೋಪಿಗಳಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್‌ಪಿ ಪ್ರದೀಪ್ ಗುಂಟಿ ಮಾಹಿತಿ ನೀಡಿದರು.

Tags

Theft caseBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X