Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಶಿಕ್ಷಕರ ಕ್ಷೇತ್ರದ ಚುನಾವಣೆಗೆ...

ಬೀದರ್ | ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅರ್ಹರು ಕಡ್ಡಾಯವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು : ಡಾ.ಗಿರೀಶ್ ಬದೋಲೆ

ವಾರ್ತಾಭಾರತಿವಾರ್ತಾಭಾರತಿ9 Oct 2025 8:11 PM IST
share
ಬೀದರ್ | ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅರ್ಹರು ಕಡ್ಡಾಯವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು : ಡಾ.ಗಿರೀಶ್ ಬದೋಲೆ

ಬೀದರ್: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅರ್ಹ ಶಿಕ್ಷಕರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಹೇಳಿದರು.

ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2026ರಲ್ಲಿ ನಡೆಯಲಿರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವುದು ಅತ್ಯಂತ ಅಗತ್ಯ. ಚುನಾವಣಾ ಆಯೋಗವು ನಿಗದಿಪಡಿಸಿದ ವೇಳಾಪಟ್ಟಿಯ ಪ್ರಕಾರ ನವೆಂಬರ್‌ 6 ಮತದಾರರ ನೋಂದಣಿಗೆ ಕೊನೆಯ ದಿನ ಎಂದು ತಿಳಿಸಿದರು.

ಅರ್ಹತಾ ಮಾನದಂಡಗಳು :

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿ ಸಲ್ಲಿಸುವವರು ಭಾರತೀಯ ಪ್ರಜೆಯಾಗಿರಬೇಕು ಹಾಗೂ ಸಂಬಂಧಿತ ಕ್ಷೇತ್ರದಲ್ಲಿ ಶಾಶ್ವತ ನಿವಾಸಿಯಾಗಿರಬೇಕು. 2025ರ ನವೆಂಬರ್‌ 1ರ ಒಳಗೆ ಕಳೆದ 6 ವರ್ಷಗಳಲ್ಲಿ ಕನಿಷ್ಠ 3 ವರ್ಷಗಳ ಕಾಲ ಪ್ರೌಢಶಾಲೆ ಅಥವಾ ಅದರ ಮೇಲಿನ ಹಂತದ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿರುವುದು ಕಡ್ಡಾಯ.

ಅರ್ಹ ಶಿಕ್ಷಕರು ಅರ್ಜಿಯ ನಮೂನೆ–19 ನಲ್ಲಿ ಅರ್ಜಿ ಸಲ್ಲಿಸಬೇಕಾಗಿದ್ದು, ಕಾರ್ಯಾವಧಿಯ ದೃಢೀಕರಣವನ್ನು ಅನುಬಂಧ–2 ನಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಂದ ಪಡೆಯಬೇಕು. ಜೊತೆಗೆ ಮತದಾರರ ಗುರುತಿನ ಚೀಟಿ ಅಥವಾ ಆಧಾರ್‌ ಕಾರ್ಡ್‌, ಬಿಳಿ ಹಿನ್ನೆಲೆಯೊಂದಿಗೆ ಮುಂಭಾಗದಿಂದ ತೆಗೆಯಲಾದ ಬಣ್ಣದ ಪಾಸ್‌ಪೋರ್ಟ್ ಅಳತೆಯ (4.5 ಸೆ.ಮೀ. x 3.5 ಸೆ.ಮೀ.) ಸಹಿ ಮಾಡಿದ ಇತ್ತೀಚಿನ ಫೋಟೋ ಅಂಟಿಸಬೇಕು.

ನೋಂದಣಿ ಪ್ರಕ್ರಿಯೆ :

ಪ್ರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ತಮ್ಮ ಸಂಸ್ಥೆಯಲ್ಲಿ ವ್ಯಾಪಕ ಪ್ರಚಾರ ನಡೆಸಿ ಎಲ್ಲ ಅರ್ಹ ಶಿಕ್ಷಕರು ಹೆಸರು ನೋಂದಾಯಿಸಿಕೊಳ್ಳುವಂತೆ ಕ್ರಮವಹಿಸಬೇಕು. ತಾಲ್ಲೂಕು ಮಟ್ಟದಲ್ಲಿ ಗ್ರೇಡ್–2 ತಹಸೀಲ್ದಾರರನ್ನು ಗುರುತಿಸಿದ ಅಧಿಕಾರಿಗಳಾಗಿ ನೇಮಿಸಲಾಗಿದ್ದು, ಅವರ ಕಚೇರಿಗಳಲ್ಲಿ ಅರ್ಜಿ ನಮೂನೆಗಳು ಲಭ್ಯವಿವೆ. ಅರ್ಜಿಗಳನ್ನು ಆನ್‌ಲೈನ್‌ ಮೂಲಕವೂ ಡೌನ್‌ಲೋಡ್‌ ಮಾಡಿ ಸಲ್ಲಿಸಬಹುದು ಎಂದು ತಿಳಿಸಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದ್ದು, ಮತದಾರರ ನೋಂದಣಿ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಮೇಲ್ವಿಚಾರಣಾಧಿಕಾರಿಯಾಗಿ, ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಎಲ್ಲಾ ಅರ್ಹ ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಕಡ್ಡಾಯವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಇದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಕ್ಷಕರ ಸಕ್ರಿಯ ಭಾಗವಹಿಸುವಿಕೆ ಖಚಿತವಾಗುತ್ತದೆ ಎಂದು ಡಾ.ಬದೋಲೆ ಹೇಳಿದರು.

ಈ ಸಂದರ್ಭದಲ್ಲಿ ಮಾಸ್ಟರ್‌ ಟ್ರೇನರ್‌ ಗೌತಮ್‌ ಅರಳಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ್‌ ಶಹಬಾದಕರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್‌ ಸುಳ್ಳೊಳ್ಳಿ, ಶಾಲಾ ಶಿಕ್ಷಣ ಇಲಾಖೆಯ ಹಾಗೂ ಬೀದರ್‌ ವಿಶ್ವವಿದ್ಯಾಲಯದ ಅಧಿಕಾರಿಗಳು, ತಾಲೂಕು ಪಂಚಾಯತ್‌ ಇಒಗಳು ಮತ್ತು ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X