ಬೀದರ್ | ಟ್ರ್ಯಾಕ್ಟರ್-ಬೈಕ್ ನಡುವೆ ಢಿಕ್ಕಿ : ಸ್ಥಳದಲ್ಲೇ ಸೈನಿಕ ಮೃತ್ಯು

ಬೀದರ್ : ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಢಿಕ್ಕಿ ಹೊಡೆದು ಸೈನಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಖಾನಾಪುರ್ ಗ್ರಾಮದಲ್ಲಿ ಇಂದು ನಡೆದಿದೆ.
ಮಹಾರಾಷ್ಟ್ರದ ಲಾತುರ್ ಜಿಲ್ಲೆಯ ಹಣಮಂತ ಜವಳಗಾ ಗ್ರಾಮದ ನಿವಾಸಿ ಯೋಗೇಶ್ (27) ಮೃತಪಟ್ಟ ಸೈನಿಕರಾಗಿದ್ದಾರೆ.
ಯೋಗೇಶ್ ಸೈನಿಕರಾಗಿದ್ದು, ರಜೆ ಮೇಲೆ ಊರಿಗೆ ಬಂದಿದ್ದರು. ತನ್ನ ಗೆಳತಿಯನ್ನು ಕರೆದುಕೊಂಡು ಹೋಗಲು ಬೀದರ್ ಗೆ ಬಂದಿದ್ದರು. ಬೀದರ್ ನಿಂದ ಮಹಾರಾಷ್ಟ್ರದ ಉದಗೀರ್ ಕಡೆಗೆ ಅತೀ ವೇಗವಾಗಿ ಬೈಕ್ ಓಡಿಸಿಕೊಂಡು ಹೋಗುತ್ತಿರುವಾಗ ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜೊತೆಗಿದ್ದ ಯುವತಿಗೆ ಗಾಯವಾಗಿದ್ದು, ಬೀದರ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Next Story





