Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಸುರಕ್ಷತೆಗಾಗಿ ದ್ವಿಚಕ್ರ ವಾಹನ...

Bidar | ಸುರಕ್ಷತೆಗಾಗಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ: ರಾಘವೇಂದ್ರ ಉಪಾಧ್ಯೆ

ವಾರ್ತಾಭಾರತಿವಾರ್ತಾಭಾರತಿ4 Oct 2026 5:57 PM IST
share
Bidar | ಸುರಕ್ಷತೆಗಾಗಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ: ರಾಘವೇಂದ್ರ ಉಪಾಧ್ಯೆ

ಬೀದರ್: ಹೆಲ್ಮೆಟ್ ಇಲ್ಲದೆ ವಾಹನ ಓಡಿಸಿದರೆ ಸರ್ಕಾರಕ್ಕೆ ಯಾವುದೇ ನಷ್ಟವಿಲ್ಲ. ನಿಮ್ಮ ಸುರಕ್ಷತೆಗಾಗಿಯೇ ಸರ್ಕಾರ ದಂಡ ವಿಧಿಸುತ್ತದೆ. ಆದ್ದರಿಂದ ಬೈಕ್ ಚಲಾಯಿಸುವ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯೆ ಸಲಹೆ ನೀಡಿದರು.

ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದಲ್ಲಿ ಶನಿವಾರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ 60 ದಿನಗಳ ಬೃಹತ್ ಕಾನೂನು ಜಾಗೃತಿ ಅಭಿಯಾನದ ನಿಮಿತ್ತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ, ಬೀದರ್ ಸಹಯೋಗದಲ್ಲಿ ಆಯೋಜಿಸಿದ್ದ ರಸ್ತೆ ಸುರಕ್ಷತೆ ಮತ್ತು ಸಾರಿಗೆ ಸೇವಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮನ್ನು ನಂಬಿ ಬದುಕುತ್ತಿರುವ ಕುಟುಂಬದವರಿಗಾಗಿಯಾದರೂ ರಸ್ತೆ ನಿಯಮಗಳನ್ನು ಪಾಲಿಸಬೇಕು. ವಿಮೆ ಇಲ್ಲದೆ ವಾಹನ ಚಲಾಯಿಸಿ ಅಪಘಾತ ಸಂಭವಿಸಿದರೆ ಮೂರನೇ ವ್ಯಕ್ತಿಗೆ ಪರಿಹಾರವನ್ನು ವಾಹನದ ಮಾಲೀಕರು ಭರಿಸಬೇಕಾಗುತ್ತದೆ. ಇಂದಿನ ಕಾಲದಲ್ಲಿ ದಂಡದ ಮೊತ್ತವು 10 ಲಕ್ಷ ರೂ. ದಿಂದ 1 ಕೋಟಿ ರೂ. ವರೆಗೂ ಆಗಬಹುದು ಎಂದು ಅವರು ಎಚ್ಚರಿಸಿದರು.

ಔರಾದ್‌ನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನಸಾಬ್ ಯಾದವಾಲ್ ಮಾತನಾಡಿ, ಜಿಲ್ಲೆಯಲ್ಲೇ ಗುಡಪಳ್ಳಿ ಗ್ರಾಮವನ್ನು ಇಂತಹ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ. ಆಧಾರ್ ಕಾರ್ಡ್, ಜನ್ಮ ದಿನಾಂಕ ಪತ್ರ, ಪಹಣಿ ತಿದ್ದುಪಡಿ, ಚಾಲನಾ ಪರವಾನಗಿ ಹಾಗೂ ವಿಮೆ ಸೇರಿದಂತೆ ಹತ್ತು ಹಲವು ಸೇವೆಗಳು ನಿಮ್ಮ ಮನೆ ಬಾಗಿಲಿಗೆ ಬಂದಿವೆ. ಗ್ರಾಮಸ್ಥರು ಈ ಅಭಿಯಾನದ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸಾರಿಗೆ ಅಧಿಕಾರಿ ಎಂ.ಡಿ. ಜಾಫರ್ ಸಾದಿಕ್ ಮಾತನಾಡಿ, ದ್ವಿಚಕ್ರ ವಾಹನವನ್ನು ಗಂಟೆಗೆ 60 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಚಲಾಯಿಸಿ ಅಪಘಾತವಾದರೆ ತಲೆಗೆ ಗಂಭೀರ ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಕಡಿಮೆ ವೇಗದಲ್ಲಿ ವಾಹನ ಚಲಾಯಿಸಿದರೆ ಗಾಯದ ಪ್ರಮಾಣ ಕಡಿಮೆಯಾಗಿ ಜೀವ ಉಳಿಸುವ ಸಾಧ್ಯತೆ ಹೆಚ್ಚುತ್ತದೆ. ಮುಖವನ್ನು ಪೂರ್ಣವಾಗಿ ಮುಚ್ಚುವ ಫುಲ್‌ಫೇಸ್ ಹೆಲ್ಮೆಟ್ ಬಳಸಬೇಕು. ಕೂದಲು ಉದುರುತ್ತದೆ ಎಂಬ ಕಾರಣ ನೀಡಿ ಹೆಲ್ಮೆಟ್ ಧರಿಸುವುದನ್ನು ನಿಲ್ಲಿಸಬಾರದು ಎಂದು ತಿಳಿಸಿದರು.

ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಗುಡಪಳ್ಳಿ ಗ್ರಾಮದ 40 ಜನರಿಗೆ ಕಲಿಕಾ ಚಾಲನಾ ಪರವಾನಗಿ ನೀಡಲಾಗಿದೆ. ಹಾಗೆಯೇ ಆರು ಜನರಿಗೆ ವಾಹನ ವಿಮೆ ಮಾಡಿಸಿಕೊಳ್ಳಲು ನೆರವು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಈ ವೇಳೆ ಬೀದರ್‌ನ ಕೈಲಾಶ್ ಶೋರೂಂ ಹಾಗೂ ರಮೇಶ್ ಹೋಂಡಾ ಶೋರೂಂ ವತಿಯಿಂದ ಹೆಲ್ಮೆಟ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಯವಾದಿ ಸಂತೋಷ್ ಕೌಟಗೆ, ಮೋಟಾರು ವಾಹನ ನಿರೀಕ್ಷಕ ಪ್ರಕಾಶ್ ಎಚ್. ಉಳ್ಳೆ, ಆಕಾಶ್ ನಾಗಮಾರಪಳ್ಳಿ, ಪ್ರವೀಣ್ ಗೋಯಲ್, ಡಾ. ರಘು ಕೃಷ್ಣಮೂರ್ತಿ, ಎಸ್‌ಡಿಎಂಸಿ ಅಧ್ಯಕ್ಷ ತುಳಸಿರಾಮ್ ಪಾಂಚಾಳ್, ಮಲ್ಲಿಕಾರ್ಜುನ್ ಕೆಂಚ, ಬಾಬುರೆಡ್ಡಿ, ಪರಶುರಾಮ್ ಚವ್ಹಾಣ್, ಶಂಕರರೆಡ್ಡಿ, ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಆಕಾಶ್ ಹಾಗೂ ನರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಭಾಗ್ಯವಂತಿ ಮೋಟಾರು ಡ್ರೈವಿಂಗ್ ಸ್ಕೂಲ್‌ನ ಪ್ರಾಚಾರ್ಯ ಶಿವರಾಜ್ ಜಮಾದಾರ್ ಖಾಜಾಪುರ ನಿರೂಪಿಸಿ, ವಂದಿಸಿದರು.

Tags

helmetsBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X