ಬೀದರ್ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬೀದರ್ : ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ ತಾಲೂಕಿನ ಪಾಶಾಪುರ್ ಗ್ರಾಮದಲ್ಲಿ ನಡೆದಿದೆ.
ಪವನ್ (25) ಆತ್ಮಹತ್ಯೆ ಮಾಡಿಕೊಂಡ ರೈತ. ಕೌಠಾ(ಬಿ) ಗ್ರಾಮದ ಕೆನರಾ ಬ್ಯಾಂಕಿನಲ್ಲಿ ಚಿನ್ನವನ್ನು ಅಡವಿಟ್ಟು ಕೃಷಿಗಾಗಿ ಸಾಲವನ್ನು ಪಡೆದುಕೊಂಡಿದ್ದ ಪವನ್ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಸಾಲ ತೀರಿಸುವ ಬಗ್ಗೆ ಚಿಂತಿತನಾಗಿದ್ದ.
ಇದೇ ಕಾರಣಕ್ಕೆ ನ.10ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿದ್ದ ಪವನ್ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಸಂತಪುರ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
Next Story





