ಬೀದರ್ | ಪೋಲಿಯೋ ರೋಗ ತಪ್ಪಿಸಲು ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕಿಸಿ : ಮಹೇಶ್ ಗೋರನಾಳಕರ್

ಬೀದರ್ : ಪೋಲಿಯೋ ಮಾರಕ ರೋಗವಾಗಿದ್ದು, ಅದನ್ನು ತಪ್ಪಿಸಲು ಕಡ್ಡಾಯವಾಗಿ 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಮಹೇಶ್ ಗೋರನಾಳಕರ್ ಅವರು ತಿಳಿಸಿದರು.
ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮೈಲೂರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕು ದಿನ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮಗುವಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿ ಚಾಲನೆ ನೀಡಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಪ್ರಕಾಶ್, ಮೈಲೂರಿನ ಅಂಗನವಾಡಿ ಕಾರ್ಯಕರ್ತೆ ಶಾವುಬಾಯಿ, ಆಶಾ ಕಾರ್ಯಕರ್ತೆ ಸುರೇಕಲಾ, ಕಲ್ಪನಾ ಮಹೇಶ್ ಹಾಗೂ ಕಲಾವಿದ ಮತ್ತು ಸಾಮಾಜಿಕ ಕಾರ್ಯಕರ್ತ ಶಿವಾಜಿ ಮಾನಕಾರೆ ಇದ್ದರು.
Next Story





