Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬ್ರಿಮ್ಸ್ ಟೆಂಡರ್‌ಗಳಲ್ಲಿ ನಿಯಮ...

Bidar | ಬ್ರಿಮ್ಸ್ ಟೆಂಡರ್‌ಗಳಲ್ಲಿ ನಿಯಮ ಉಲ್ಲಂಘನೆ : ಸ್ವಾಮಿದಾಸ್ ಕೆಂಪೆನೋರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ16 Oct 2026 7:14 PM IST
share
Bidar | ಬ್ರಿಮ್ಸ್ ಟೆಂಡರ್‌ಗಳಲ್ಲಿ ನಿಯಮ ಉಲ್ಲಂಘನೆ : ಸ್ವಾಮಿದಾಸ್ ಕೆಂಪೆನೋರ್ ಆರೋಪ

ಬೀದರ್: ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಆಸ್ಪತ್ರೆಯಲ್ಲಿ ಸುಮಾರು 10 ಕೋಟಿ ರೂ. ಮೊತ್ತದ ವಿವಿಧ ಟೆಂಡರ್‌ಗಳ ಪ್ರಕ್ರಿಯೆಯಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ, ನಿರ್ದಿಷ್ಟ ಏಜೆನ್ಸಿಗಳಿಗೆ ಅನುಕೂಲವಾಗುವಂತೆ ಷರತ್ತುಗಳನ್ನು ರೂಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆಯ ಸಂಸ್ಥಾಪಕ ಅಧ್ಯಕ್ಷ ಸ್ವಾಮಿದಾಸ್ ಕೆಂಪೆನೋರ್ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬ್ರಿಮ್ಸ್‌ನಲ್ಲಿ ಔಷಧ, ಕೆಮಿಕಲ್ಸ್, ರಿಯೇಜೆಂಟ್ಸ್, ಕಂಪ್ಯೂಟರ್, ಎಲೆಕ್ಟ್ರಿಕಲ್ ಸಾಮಗ್ರಿ, ಪ್ಲಂಬಿಂಗ್ ಹಾಗೂ ಕ್ಯಾಟರಿಂಗ್ ಸೇವೆ ಸೇರಿದಂತೆ ವಿವಿಧ ಕಾಮಗಾರಿಗಳು ಮತ್ತು ಸಾಮಗ್ರಿಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ. ಈ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳದೆ, ತಮಗೆ ಬೇಕಾದ ಸಂಸ್ಥೆಗಳಿಗೆ ಗುತ್ತಿಗೆ ದೊರೆಯುವಂತೆ ಬ್ರಿಮ್ಸ್ ನಿರ್ದೇಶಕಿ ಡಾ. ಶಾಂತಲಾ ಕೌಜಲಗಿ ಹಾಗೂ ಸಲಹೆಗಾರ ಪ್ರಕಾಶ್ ಸೂರ್ಯವಂಶಿ ಷರತ್ತುಗಳನ್ನು ವಿಧಿಸಿದ್ದಾರೆ ಎಂದು ದೂರಿದರು.

99 ಲಕ್ಷ ರೂ. ಮೊತ್ತದ ಕೆಮಿಕಲ್ಸ್ ಮತ್ತು ರಿಯೇಜೆಂಟ್ಸ್ ಪೂರೈಕೆ ಟೆಂಡರ್‌ಗೆ 6 ಕೋಟಿ ರೂ. ವಾರ್ಷಿಕ ವಹಿವಾಟಿನ ಅರ್ಹತೆ ನಿಗದಿಪಡಿಸಲಾಗಿದೆ. ಆದರೆ, ಅದೇ ಮೊತ್ತದ ಔಷಧ ಪೂರೈಕೆ ಟೆಂಡರ್‌ಗೆ 99 ಲಕ್ಷ ರೂ. ವಹಿವಾಟಿನ ಅರ್ಹತೆ ನಿಗದಿಪಡಿಸಲಾಗಿದೆ. ಕಂಪ್ಯೂಟರ್ ಖರೀದಿ ಟೆಂಡರ್‌ಗೆ ವಹಿವಾಟಿನ ಷರತ್ತನ್ನೇ ವಿಧಿಸಿಲ್ಲ. ಒಂದೇ ಸಂಸ್ಥೆಯಲ್ಲಿ ವಿವಿಧ ಟೆಂಡರ್‌ಗಳಿಗೆ ವಿಭಿನ್ನ ಮಾನದಂಡಗಳನ್ನು ಅನುಸರಿಸುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಸುಮಾರು 45 ಲಕ್ಷ ರೂ. ಮೊತ್ತದ ಎಲೆಕ್ಟ್ರಿಕಲ್ ಸಾಮಗ್ರಿ ಹಾಗೂ 27 ಲಕ್ಷ ರೂ. ಮೊತ್ತದ ಪ್ಲಂಬಿಂಗ್ ಕಾಮಗಾರಿ ಸೇರಿದಂತೆ ಹಲವು ಟೆಂಡರ್‌ಗಳನ್ನು ಅಗತ್ಯ ಅನುಮತಿ ಪಡೆಯದೆ ಕರೆಯಲಾಗಿದೆ. ಟೆಂಡರ್‌ಗಳಲ್ಲಿ ಇಎಂಡಿ ಮೊತ್ತ ನಿಗದಿಪಡಿಸುವಲ್ಲಿಯೂ ತಾರತಮ್ಯ ಮಾಡಲಾಗಿದೆ. ಸಣ್ಣ ಉದ್ಯಮಿಗಳು ಹಾಗೂ ಸ್ಥಳೀಯ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ತಡೆಯುವ ಉದ್ದೇಶದಿಂದ ಇಂತಹ ಷರತ್ತುಗಳನ್ನು ವಿಧಿಸಲಾಗಿದೆ ಎಂದು ಅವರು ಆರೋಪಿಸಿದರು.

ಬ್ರಿಮ್ಸ್ ನಿರ್ದೇಶಕಿ ಡಾ. ಶಾಂತಲಾ ಕೌಜಲಗಿ ಹಾಗೂ ಆರ್ಥಿಕ ಸಲಹೆಗಾರ ಪ್ರಕಾಶ್ ಸೂರ್ಯವಂಶಿ ಅವರನ್ನೊಳಗೊಂಡ ಟೆಂಡರ್ ಸಮಿತಿಯ ಕಾರ್ಯವೈಖರಿ ಕುರಿತು ಜಿಲ್ಲಾಧಿಕಾರಿಗಳು ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ನಿಯಮಬಾಹಿರವಾಗಿ ನಡೆದಿರುವ ಟೆಂಡರ್‌ಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ವಾಮಿದಾಸ್ ಕೆಂಪೆನೋರ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಮುಖಂಡರಾದ ಸುರೇಶ್ ಎನ್. ದೊಡ್ಡಿ, ಕಮಲ್ ಹಸನ್ ಬಾವಿದೊಡ್ಡಿ, ರಮೇಶ್ ಹಲಬರ್ಗಾ, ಡಾ. ಜೇಮ್ಸ್, ಘಾಳೆಪ್ಪ ಹಾಗೂ ರೋಹನ್ ಮಾಳಗೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X