ಯಾದಗಿರಿ| ಪತ್ನಿ ಮೇಲೆ ದೌರ್ಜನ್ಯ; ಪತಿಗೆ 2 ವರ್ಷ ಜೈಲು ಶಿಕ್ಷೆ, 15 ಸಾವಿರ ರೂ. ದಂಡ

ಸಾಂದರ್ಭಿಕ ಚಿತ್ರ | PC : Image by magnific
ಸುರಪುರ: ಪತ್ನಿ ಮೇಲೆ ದೌರ್ಜನ್ಯ , ಮಾನಸಿಕ ಕಿರುಕುಳ ಜೊತೆಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಸುರಪುರದ ನ್ಯಾಯಾಲಯ ಪತಿಗೆ 2 ವರ್ಷ ಜೈಲು ಶಿಕ್ಷೆ, 15 ಸಾವಿರ ರೂ. ದಂಡ ವಿಧಿಸಿದೆ.
ತಾಲೂಕಿನ ಮಲ್ಲಾ (ಬಿ) ಗ್ರಾಮದ ಮಲ್ಲನಗೌಡ ವಣಿಕ್ಯಾಳ ಎನ್ನುವ ವ್ಯಕ್ತಿಯು ತನ್ನ ಪತ್ನಿಯ ಮೇಲೆ ದೌರ್ಜನ್ಯ, ಮಾನಸಿಕ ಕಿರುಕುಳ, ಜೊತೆಗೆ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ 2023ರ ಆಗಸ್ಟ್ 23ರಂದು ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಸುರಪುರದ ನ್ಯಾಯಾಲಯದ ಹಿರಿಯ ಶ್ರೇಣಿಯ ಸಿವಿಲ್ ಮತ್ತು ಜೆ ಎಂ ಎಸ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಫಕೀರವ್ವ ಕೆಳಗೇರಿ ಅವರು ಆರೋಪಿ ಮಲ್ಲನಗೌಡ ವಣಿಕ್ಯಾಳಗೆ ಶಿಕ್ಷೆ ವಿಧಿಸಿದ್ದಾರೆ.
ಪ್ರಕರಣದ ಕುರಿತು ಕೆಂಭಾವಿ ಠಾಣೆಯ ಪಿಎಸ್ಐ ರಾಜಶೇಖರ ರಾಠೋಡ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
Next Story




