ಬೀದರ್ | ನೀರಿನ ಸಮಸ್ಯೆ : ಮದಕಟ್ಟಿ ಗ್ರಾಮ ಪಂಚಾಯತ್ ಕಚೇರಿಗೆ ಬೀಗ ಜಡಿದು ಮಹಿಳೆಯರಿಂದ ಆಕ್ರೋಶ

ಬೀದರ್ : ಮದಕಟ್ಟಿ ಗ್ರಾಮದಲ್ಲಿ ಕೆಲ ದಿನಗಳಿಂದ ನೀರಿನ ಸಮಸ್ಯೆ ಉದ್ಭವಿಸಿದೆ ಎಂದು ಆರೋಪಿಸಿ ಮದಕಟ್ಟಿ ಗ್ರಾಮ ಪಂಚಾಯತ್ ಕಚೇರಿಗೆ ಶನಿವಾರ ಬೆಳಿಗ್ಗೆ ಬೀಗ ಜಡಿದು ಮಹಿಳೆಯರು ಆಕ್ರೋಶ ಹೊರ ಹಾಕಿದರು.
ಕೆಲದ ಹಲವು ದಿನಗಳಿಂದ ಮದಕಟ್ಟಿ ಗ್ರಾಮದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಸಮರ್ಪಕವಾಗಿ ನೀರಿನ ಸರಬರಾಜು ಮಾಡುತ್ತಿಲ್ಲ. ಹಲವು ಬಾರಿ ಮನವಿ ಮಾಡಿದರೂ ಸಹ ಗ್ರಾಮ ಪಂಚಾಯತ್ ಅಧಿಕಾರಿಗಳು ನೀರಿನ ಸಮಸ್ಯೆ ಬಗೆಹರಿಸುತ್ತಿಲ್ಲ ಎಂದು ಗ್ರಾಮದ ಮಹಿಳೆಯರು ಆರೋಪಿಸಿದ್ದಾರೆ.
ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಯಲ್ಲಿ ಇರುವಾಗಲೇ ಹೊರಗಿನಿಂದ ಬೀಗ ಹಾಕಿ ಆಕ್ರೋಶ ಹೊರ ಹಾಕಿದ ಮಹಿಳೆಯರು ಆದಷ್ಟು ಬೇಗ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
Next Story




