Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಜಲವರ್ಣ ಚಿತ್ರಕಲೆ ಭಾವನೆಗಳ...

Bidar | ಜಲವರ್ಣ ಚಿತ್ರಕಲೆ ಭಾವನೆಗಳ ಅಭಿವ್ಯಕ್ತಿಗೆ ಪರಿಣಾಮಕಾರಿ ಮಾಧ್ಯಮ: ನಾಗಣ್ಣ ಪರಿಟ್

ಜಲವರ್ಣ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ22 Sept 2026 7:38 PM IST
share
Bidar | ಜಲವರ್ಣ ಚಿತ್ರಕಲೆ ಭಾವನೆಗಳ ಅಭಿವ್ಯಕ್ತಿಗೆ ಪರಿಣಾಮಕಾರಿ ಮಾಧ್ಯಮ: ನಾಗಣ್ಣ ಪರಿಟ್

ಬೀದರ್: ಕಲೆಯ ಮೂಲಕ ಬದುಕಿನ ಅನುಭವಗಳನ್ನು ದಾಖಲಿಸುವ ಶಕ್ತಿ ಕಲಾವಿದರಿಗಿದ್ದು, ಜಲವರ್ಣ ಚಿತ್ರಕಲೆಯು ಪ್ರಕೃತಿ, ಜನಜೀವನ ಹಾಗೂ ಭಾವನೆಗಳನ್ನು ಸರಳವಾಗಿ ಮತ್ತು ಪರಿಣಾಮಕಾರಿಯಾಗಿ ಅಭಿವ್ಯಕ್ತಿಸುವ ಮಾಧ್ಯಮವಾಗಿದೆ ಎಂದು ಮಹಾನಗರ ಪಾಲಿಕೆ ವಲಯ ಆಯುಕ್ತ ನಾಗಣ್ಣ ಪರಿಟ್ ಹೇಳಿದರು.

ನಗರದ ಡಾ. ಎಸ್.ಎಂ. ಪಂಡಿತ್ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಕರ್ನಾಟಕ ಲಲಿತ ಕಲಾ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಆಯೋಜಿಸಿದ್ದ ಜಲವರ್ಣ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚಿತ್ರಕಲೆ ಕೇವಲ ಬಣ್ಣಗಳನ್ನು ಕಾಗದದ ಮೇಲೆ ಮೂಡಿಸುವ ಕಲೆಯಲ್ಲ. ಅದು ಕಲಾವಿದನ ಕಲ್ಪನೆ, ಭಾವನೆ ಮತ್ತು ಸಮಾಜವನ್ನು ನೋಡುವ ದೃಷ್ಟಿಕೋನದ ಪ್ರತಿಬಿಂಬವಾಗಿದೆ. ಜಲವರ್ಣದಂತಹ ಸೂಕ್ಷ್ಮ ಕಲಾ ಪ್ರಕಾರದಲ್ಲಿ ಉತ್ತಮ ತರಬೇತಿ ಪಡೆದರೆ ಕಲಾವಿದರು ತಮ್ಮದೇ ಆದ ವಿಶಿಷ್ಟ ಕಲಾ ಶೈಲಿಯನ್ನು ರೂಪಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯ ಸಂಚಾಲಕ ಬಸವರಾಜ್ ಜಾನೆ ಮಾತನಾಡಿ, ರಾಜ್ಯದ ವಿವಿಧ ಭಾಗಗಳ ಪ್ರತಿಭಾವಂತ ಕಲಾವಿದರನ್ನು ಒಂದೆಡೆ ಸೇರಿಸಿ ಅವರ ಕಲಾ ಕೌಶಲವನ್ನು ವೃದ್ಧಿಸುವುದು ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿದೆ ಎಂದರು.

ಗಿರಿಜನ ಉಪಯೋಜನೆಯಡಿ ಕಲಾವಿದರಿಗೆ ತರಬೇತಿ ನೀಡುವ ಮೂಲಕ ಅವರಲ್ಲಿರುವ ಸೃಜನಶೀಲ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.

ಹಾವೇರಿ, ಗದಗ, ಬೀದರ್, ಮೈಸೂರು, ಪಾವಗಡ, ಗುಳೇದಗುಡ್ಡ, ಇಳಕಲ್, ಧಾರವಾಡ, ದೊಡ್ಡಮಾಲೂರು, ಯಾದಗಿರಿ ಹಾಗೂ ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳ ಕಲಾವಿದರು ಶಿಬಿರದಲ್ಲಿ ಭಾಗವಹಿಸಿದ್ದಾರೆ.

ಸೆಪ್ಟೆಂಬರ್ 21ರಿಂದ 24ರವರೆಗೆ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಜಲವರ್ಣ ಕಲೆಯ ಸೂಕ್ಷ್ಮತೆ, ಬಣ್ಣಗಳ ಸಂಯೋಜನೆ ಹಾಗೂ ಚಿತ್ರರಚನೆಯ ತಂತ್ರಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ.

ಹಿರಿಯ ಕಲಾವಿದ ಬಿ.ಕೆ. ಬಡಿಗೇರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಜಲವರ್ಣ ಚಿತ್ರಕಲೆಯ ವಿವಿಧ ತಂತ್ರಗಳನ್ನು ಕಲಾವಿದರಿಗೆ ಪ್ರಾಯೋಗಿಕವಾಗಿ ಬೋಧಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಡಾ. ಎಸ್.ಎಂ. ಪಂಡಿತ್ ಚಿತ್ರಕಲಾ ಮಹಾವಿದ್ಯಾಲಯದ ಅಧ್ಯಕ್ಷೆ ಕವಿತಾ, ಹಿರಿಯ ಕಲಾವಿದರಾದ ಪ್ರಭಾಕರ್, ಅಶೋಕ್ ಹಿರೇಮಠ್, ಸೋಮಶೆಟ್ಟಿ, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಷ್ಣುಕಾಂತ್ ಠಾಕೂರ್, ಡಾ. ಎಸ್.ಎಂ. ಪಂಡಿತ್ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಸುರೇಖಾ ವಾಲ್ದೊಡ್ಡೆ, ಮಂಜುಳಾ ಜಾನೆ, ಬಿ.ಕೆ ಬಡಿಗೇರ್, ಯೋಗೇಶ್ ಮಠದ್, ನಾಗರಾಜ್ ಜೋಗಿ ಹಾಗೂ ಸಂತೋಷ್ ಹೊನ್ನಿಕೇರಿ ಸೇರಿದಂತೆ ಶಿಬಿರಾರ್ಥಿಗಳು, ಉಪನ್ಯಾಸಕರು ಭಾಗವಹಿಸಿದ್ದರು. ವಿಜಯಶ್ರೀ ಸ್ವಾಗತಿಸಿದರು, ಪೀಟರ್ ನಿರೂಪಿಸಿದರು. ಸುಧಾರಾಣಿ ವಂದಿಸಿದರು.

Tags

Watercolor paintingBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X