Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಸತತ ಪ್ರಯತ್ನದಿಂದ ಮಾದಕ...

ಬೀದರ್ | ಸತತ ಪ್ರಯತ್ನದಿಂದ ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವ ಯುವ ಸಮೂಹವನ್ನು ನಿಯಂತ್ರಿಸಲು ಸಾಧ್ಯ : ನ್ಯಾ.ಪ್ರಕಾಶ್ ಬನಸೋಡೆ

ವಾರ್ತಾಭಾರತಿವಾರ್ತಾಭಾರತಿ27 March 2025 7:49 PM IST
share
Photo of Program

ಬೀದರ್ : ಮಧ್ಯಪಾನ ಮತ್ತು ಮಾದಕ ವಸ್ತುಗಳ ಚಟುವಟಿಕೆಗಳಿಗೆ ಯುವ ಸಮೂಹ ಬಲಿಯಾಗುತ್ತಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ, ವಿವಿಧ ಇಲಾಖೆ, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳ ಸಹಕಾರ ಮತ್ತು ಸಂಘಟಿತ ಪ್ರಯತ್ನದಿಂದ ಮಾತ್ರ ಇದನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ್ ಬನಸೋಡೆ ಅವರು ಹೇಳಿದರು.

ಇಂದು ಜಮಗಿ ಔರಾದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ʼಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮʼ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಜೀವನದಲ್ಲಿ ಉತ್ತಮ ಹವ್ಯಾಸಗಳು ರೂಢಿಸಿಕೊಂಡು ಮಾದಕ ವಸ್ತುಗಳು ಸೇವನೆ ಬೇಡವೆಂದು ನಿರ್ಧಾರ ಕೈಗೊಳ್ಳಬೇಕು. ತಮ್ಮ ಪರಿಚಯದವರಿಗೂ ಕೂಡಾ ಇವುಗಳನ್ನು ಸೇವನೆ ಮಾಡದಂತೆ ಜಾಗೃತರನ್ನಾಗಿ ಮಾಡಿ ಮಾದಕ ವಸ್ತುಗಳ ದುಷ್ಚಟಗಳಿಗೆ ಒಳಗಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ನಂದೀಶ್ವರ್ ನಾಟ್ಯ ಸಂಘ ಚಿಮಕೋಡ ಇವರಿಂದ ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ಮದ್ಯಪಾನದ ಬೀದಿ ನಾಟಕ ಪ್ರದರ್ಶನ ಮಾಡಲಾಯಿತು.

ಈ ಸಂದರ್ಭದಲ್ಲಿ ಅಬಕಾರಿ ಉಪ ಆಯುಕ್ತ ರವಿಶಂಕರ್, ಔರಾದ್ ತಾಲ್ಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಹಾಗೂ ಸಿವಿಲ್ ನ್ಯಾಯಾಧೀಶರಾದ ಹಾಜಿ ಹುಸೇನಸಾಬ್ ಯಾದವಾಡ್, ಸಿವಿಲ್ ನ್ಯಾಯಧೀಶ ಜೆ.ಎಂ.ಎಫ್.ಸಿ., ಜಿ .ಡಿ ಶ್ರೀಮಾಳೆ, ಔರಾದ್‌ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಸಂದೀಪ್ ಮೇತ್ರೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಆಕಾಶ್ ಸಜ್ಜನಶೆಟ್ಟಿ, ಅಬಕಾರಿ ಇಲಾಖೆಯ ಸಿಬಂದಿ ಹಾಗೂ ಸಂತಪೂರ್ ಪೊಲೀಸ್ ಠಾಣೆಯ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X