Bidar | ವಿದ್ಯುತ್ ತಂತಿ ತಗುಲಿ ಮಹಿಳೆ ಮೃತ್ಯು

ಬೀದರ್: ವಿದ್ಯುತ್ ತಂತಿ ತುಂಡಾಗಿ ಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮಳಚಾಪುರ್ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮೃತರನ್ನು ಗ್ರಾಮದ ನಿವಾಸಿ ತುಳಸಮ್ಮಾ ಎಂದು ಗುರುತಿಸಲಾಗಿದೆ.
ತುಳಸಮ್ಮ ಅವರು ಗುರುವಾರ ಬೆಳಿಗ್ಗೆ ಕಬ್ಬಿನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಅವರ ಮೇಲೆ ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯು ಧನ್ನೂರ್ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Next Story




