Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ರೋಗವಾಹಕ ಆಶ್ರಿತ ರೋಗಗಳ...

Bidar | ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಿಸಲು ಕಾರ್ಯನಿರ್ವಹಿಸಿ : ಡಿಸಿ ಶಿಲ್ಪಾ ಶರ್ಮಾ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 July 2026 7:08 PM IST
share
Bidar | ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಿಸಲು ಕಾರ್ಯನಿರ್ವಹಿಸಿ : ಡಿಸಿ ಶಿಲ್ಪಾ ಶರ್ಮಾ ಸೂಚನೆ

ಬೀದರ್ : ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚಿಕುನ್‌ಗುನ್ಯಾ ಸೇರಿದಂತೆ ರೋಗವಾಹಕ ಆಶ್ರಿತ ಸಾಂಕ್ರಾಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2027ರೊಳಗೆ ಜಿಲ್ಲೆಯನ್ನು ಮಲೇರಿಯಾ, ಡೆಂಗ್ಯೂ, ಚಿಕುನ್‌ಗುನ್ಯಾ, ಆನೆಕಾಲು ರೋಗ, ಮೆದುಳು ಜ್ವರ ಹಾಗೂ ಝಿಕಾ ವೈರಸ್ ಸೋಂಕಿನಿಂದ ಮುಕ್ತಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಲು ವಾರಕ್ಕೊಮ್ಮೆ ಲಾರ್ವಾನಾಶಕ ದ್ರಾವಣ ಸಿಂಪಡಣೆ ಕಡ್ಡಾಯವಾಗಿ ನಡೆಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸುವಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಗುಂಡಿ, ತಗ್ಗುಗಳನ್ನು ಮುಚ್ಚಿ ನೀರು ಸಂಗ್ರಹವಾಗದಂತೆ ತಡೆಯಬೇಕು. ಕೊಳವೆಬಾವಿ ಹಾಗೂ ಸಾರ್ವಜನಿಕ ನಲ್ಲಿಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ಭದ್ರವಾಗಿ ಮುಚ್ಚಿ, ನೀರು ಸರಬರಾಜಿಗೂ ಮುನ್ನ ಅಗತ್ಯ ಪ್ರಮಾಣದಲ್ಲಿ ಕ್ಲೋರಿನೇಷನ್ ಮಾಡಬೇಕು ಎಂದು ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಿದರು.

ಅಂಗನವಾಡಿ ಕಾರ್ಯಕರ್ತೆಯರು ಮನೆ-ಮನೆಗೆ ತೆರಳಿ ಸೊಳ್ಳೆಗಳಿಂದ ಹರಡುವ ರೋಗಗಳ ಕುರಿತು ಜಾಗೃತಿ ಮೂಡಿಸಬೇಕು. ಆರೋಗ್ಯ ಇಲಾಖೆ ಸಹಯೋಗದಲ್ಲಿ ಶಾಲೆ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಾಗಾರಗಳನ್ನು ಆಯೋಜಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದರು. ಬಸ್ ಡಿಪೋಗಳಲ್ಲಿ ಹಳೆಯ ಟೈರ್‌ಗಳು ಹಾಗೂ ಬಿಡಿಭಾಗಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವಂತೆ ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ 14 ಐಸಿಟಿಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಚ್‌ಐವಿ ಪರೀಕ್ಷೆ ನಡೆಸಲಾಗುತ್ತಿದೆ. ಸೋಂಕಿತರು ಬ್ರೀಮ್ಸ್ ಆಸ್ಪತ್ರೆಯ ಆಪ್ತ ಸಮಾಲೋಚನಾ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಮತ್ತು ಸಲಹೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಸಭೆಯಲ್ಲಿ ಬೀದರ್ ಮಹಾನಗರ ಪಾಲಿಕೆಯ ಆಯುಕ್ತ ಮುಕಲ್ ಜೈನ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸುರ್ಯಾಕಾಂತ್ ಬಿರಾದಾರ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ್ ನಿರಗೂಡೆ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X