Bidar | ಆಸ್ಪತ್ರೆಯ ಕಟ್ಟಡಕ್ಕೆ ಪೇಂಟಿಂಗ್ ಮಾಡುವ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಮೃತ್ಯು

ಸಾಂದರ್ಭಿಕ ಚಿತ್ರ | Photo credit : gemini ai
ಬಸವಕಲ್ಯಾಣ : ನಗರದ ಪ್ರತಿಷ್ಠಿತ ಮೂಲಗೆ ಮಲ್ಟಿಸ್ಪೇಷಲಿಟಿ ಆಸ್ಪತ್ರೆಯ ಮೂರನೇ ಮಹಡಿಯ ಮೇಲಿಂದ ಬಿದ್ದು ಪೇಂಟಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ತಾಲ್ಲೂಕಿನ ಬಗದುರಿ ಗ್ರಾಮದ ನಾಗೇಶ್ ಮಹಾಗಾಂವ್ (50) ಮೃತಪಟ್ಟ ಕಾರ್ಮಿಕನಾಗಿದ್ದಾನೆ.
ಆಸ್ಪತ್ರೆಯ ಕಟ್ಟಡಕ್ಕೆ ಬಣ್ಣ ಹಚ್ಚುವ ವೇಳೆ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Next Story




