ಬೀದರ್ | ಯುವ ಪತ್ರಕರ್ತ ದೇವರಾಜ ವನಗೇರಿ ಅವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರದಾನ

ಬೀದರ್ : ಯುವ ಪತ್ರಕರ್ತ ದೇವರಾಜ ವನಗೇರಿ ಅವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ, ಕೇತಕಿ ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಧ್ಯಮ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಬೀದರ್ ಜಿಲ್ಲೆಯ ಯುವ ಪತ್ರಕರ್ತ ದೇವರಾಜ ವನಗೇರಿ ಅವರಿಗೆ ರಾಜ್ಯ ಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಳೆದ ಒಂದು ವರ್ಷದಿಂದ ಸುದ್ದಿ ವಾಹಿನಿಯೊಂದರಲ್ಲಿ ಬೀದರ್ ಜಿಲ್ಲಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿರುವ ದೇವರಾಜ ಅವರು, ಶೋಷಿತ ಸಮುದಾಯ ಹಾಗೂ ತಳ ಸಮುದಾಯಗಳ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಲವಾರು ಪ್ರಮುಖ ಜನಪರ ಸುದ್ದಿಗಳು ಬಿತ್ತರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಾ ಕೆಲ ಬದಲಾವಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ದೇವರಾಜ ಅವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕಾರ್ಯಕ್ರಮದಲ್ಲಿ ಇನ್ಸೈಟ್ ಐಎಎಸ್ ಅಕಾಡೆಮಿ ಮುಖ್ಯಸ್ಥ ಜಿ.ಬಿ. ವಿನಯಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.





