Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಕೆಪಿಎಸ್ ಸಿ ಹಗರಣದಲ್ಲಿನ ಪಾಲಿನ ಬಗ್ಗೆ...

ಕೆಪಿಎಸ್ ಸಿ ಹಗರಣದಲ್ಲಿನ ಪಾಲಿನ ಬಗ್ಗೆ ಬಿಜೆಪಿ ಪಾದಯಾತ್ರೆ ಮಾಡಲಿ: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ1 Sept 2026 11:38 AM IST
share
ಕೆಪಿಎಸ್ ಸಿ ಹಗರಣದಲ್ಲಿನ ಪಾಲಿನ ಬಗ್ಗೆ ಬಿಜೆಪಿ ಪಾದಯಾತ್ರೆ ಮಾಡಲಿ: ಪ್ರಿಯಾಂಕ್ ಖರ್ಗೆ

ಬೀದರ್: ಬಿಜೆಪಿಯಲ್ಲಿರುವವರು ಎಲ್ಲರೂ ಯುವಕರ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ದುಡ್ಡಿಗೋಸ್ಕರ ಯುವಕರ ಭವಿಷ್ಯ ಮಾರಾಟಕ್ಕಿಟ್ಟಿದ್ದಾರೆ. ಬಿಜೆಪಿಯ ನಂಟಿರುವವರು ಕೆಪಿಎಸ್ಸಿ ಹಗರಣದಲ್ಲಿ ಪಾಲ್ಗೊಂಡಿದ್ದಾರೆ. ಅವರು ಮೊದಲು ಕೆಪಿಎಸ್ ಸಿ ಹಗರಣದಲ್ಲಿನ ಪಾಲಿನ ಬಗ್ಗೆ ಪಾದಯಾತ್ರೆ ಮಾಡಲಿ ಎಂದು ಗೃಹಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್ ಸಿ ಚೆಯರ್ ಮ್ಯಾನ್, ಮೇಂಬರ್ ಸೇರಿದಂತೆ ಇವಾಗ ಸಿಕ್ಕಿಬಿದ್ದಿರುವ ವ್ಯಕ್ತಿ ಎಲ್ಲರೂ ಬಿಜೆಪಿಯ ಕಾರ್ಯಕರ್ತರಾಗಿದ್ದಾರೆ. ಇದರ ಬಗ್ಗೆ ಯಾಕೆ ಅವರು ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ನಾಗೇಂದ್ರರ ವಿಚಾರದಲ್ಲಿ ಸಿಬಿಐ ವರ್ತಿಸಿರುವ ಬಗ್ಗೆ ಸದನದಲ್ಲಿ ಚರ್ಚೆಯಾಗಿದೆ. ಪಕ್ಷಕ್ಕೆ ಮುಜುಗರ ಆಗಬಾರದು ಎಂದು ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ಬಿಜೆಪಿಯವರು ಪಾದಯಾತ್ರೆ ಮಾಡಲಿ, ಆದರೆ ಅವರಿಗೆ ಧೈರ್ಯವಿದ್ದರೆ ಕೆಪಿಎಸ್ ಸಿಯಲ್ಲಿ ಏನೇನು ಆಗಿದೆ ಎನ್ನುವುದರ ಬಗ್ಗೆಯೂ ಜನರಿಗೆ ತಿಳಿಸಲಿ ಎಂದು ಒತ್ತಾಯಿಸಿದರು.

ಬರ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ಎರಡು ಸಲ ಪತ್ರ ಬರೆದಿದ್ದೇವೆ. ಸಿಎಂ, ಡಿಸಿಎಂ ಕೇಂದ್ರಕ್ಕೆ ಹೋಗಿ ಭೇಟಿಯಾಗಿ ಬಂದಿದ್ದಾರೆ. ಬಿಜೆಪಿಯವರು ಅಸೆಂಬ್ಲಿಯಲ್ಲಿ ಬರದ ಚರ್ಚೆ ಬಗ್ಗೆ ಮಾತನಾಡಿ ಅಂದ್ರು ಮಾತನಾಡಲಿಲ್ಲ, ಆಗೇನು ಕತ್ತೆ ಕಾಯುತ್ತಿದ್ದರಾ ಎಂದು ಖಾರವಾಗಿ ಪ್ರಶ್ನಿಸಿದ ಅವರು, ಈಗ ಯಾಕೆ ಜನರ ಬಗ್ಗೆ ಕಾಳಜಿ ಬಂದಿದೆ ಎಂದು ಕೇಳಿದರು.

ಕೆಪಿಎಸ್ ಸಿ ಅಕ್ರಮದ ಕುರಿತು ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ತೂಕದ ಮಾತನಾಡಬೇಕು. ಪರೀಕ್ಷೆ ಮಾಡುವ ಜವಾಬ್ದಾರಿ ಕೆಪಿಎಸ್ ಸಿಯದ್ದಾಗಿದೆ. ಕೆಪಿಎಸ್ ಸಿ ಚೆಯರ್ ಮ್ಯಾನ್ ಬಿಜೆಪಿ ನಾಮಿನೆಟ್ ಆಗಿದ್ದಾರೆ ಎಂದು ಆರೋಪಿಸಿದರು.

ನಾನೇನು ರೆಸಾರ್ಟ್ ಗೆ ಹೋಗಿ ಪರೀಕ್ಷೆ ಬರೆಸಿದ್ದೀನಾ? ಅಥವಾ ಮೈತ್ರಿಕೂಟದ ನಾಯಕರು ಬರೆಸಿದ್ದಾ? ಒಂದು ದಾಖಲೆ ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಚಿಕ್ಕ ಮಕ್ಕಳು ಕೂಡ ಈ ಥರಾ ಮಾತನಾಡುವುದಿಲ್ಲ. ಹಾಗೆ ಮಾತನಾಡಿದರೆ ಹೇಗೆ ಉತ್ತರ ನೀಡಲು ಸಾಧ್ಯವಾಗುತ್ತದೆ ಎಂದು ಕೇಳಿದ ಅವರು, ಕುಮಾರಸ್ವಾಮಿ ಕೇವಲ ಹಿಟ್ ಆಂಡ್ ರನ್ ಮಾಡುತ್ತಾರೆ ಎಂದು ಆಕ್ರೋಶ ಹೊರಹಾಕಿದರು.

ಬಿಜೆಪಿ, ಜೆಡಿಎಸ್ ಅಸ್ತಿತ್ವದಲ್ಲಿ ಇರಲಿಕ್ಕೆ ಅವರು ಮಾತನಾಡುತ್ತಾರೆ. ಆರೆಸ್ಸೆಸ್ ನಲ್ಲಿ ಅಂಕ ಪಡೆಯುವುದಕ್ಕಾಗಿ ಅವರು ನನ್ನ ಹೆಸರು ಬಳಸುತ್ತಾರೆ ಎಂದರು.

ಸಚಿವ ಬಸವರಾಜ ರಾಯರೆಡ್ಡಿ ಹೇಳಿಕೆ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲಿಮರು ನಮ್ಮ ದೇಶದಲ್ಲೇ ಇರಬೇಕು, ಅವರು ಇರದೇ ಈ ದೇಶ ಕಟ್ಟುವುದಕ್ಕೆ ಆಗುವುದಿಲ್ಲವೆಂದು ಮೋಹನ್ ಭಾಗವತ್ ಅವರೇ ಹೇಳಿದ್ದಾರೆ. ಅಮೆರಿಕದಿಂದ ಡಾಲರ್ಸ್ ದೇಣಿಗೆ ಬಂದಾಗ ಐಕ್ಯ ನೆನಪಾಗುತ್ತದೆ. ಇಲ್ಲಿ ಬಂದಾಗ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದಕ್ಕೆ ಹಿಂದೂ ರಾಷ್ಟ್ರ ಅಂತಾರೆ ಎಂದು ಅವರು ಟೀಕಿಸಿದರು.

Tags

Priyanak KhargeKPSC exam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X