Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಸರ್ವಪಕ್ಷ ನಿಯೋಗಕ್ಕೆ ಬರಲು ಬಿಜೆಪಿಗೆ...

ಸರ್ವಪಕ್ಷ ನಿಯೋಗಕ್ಕೆ ಬರಲು ಬಿಜೆಪಿಗೆ ಮನಸ್ಸಿಲ್ಲ : ಸಂಸದ ಸಾಗರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ30 Sept 2026 8:27 PM IST
share
ಸರ್ವಪಕ್ಷ ನಿಯೋಗಕ್ಕೆ ಬರಲು ಬಿಜೆಪಿಗೆ ಮನಸ್ಸಿಲ್ಲ : ಸಂಸದ ಸಾಗರ್ ಖಂಡ್ರೆ

ಭಾಲ್ಕಿ: ಕರ್ನಾಟಕ ರಾಜ್ಯ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ಹೆಚ್ಚಿನ ಪರಿಹಾರ ಹಾಗೂ ಆರ್ಥಿಕ ನೆರವು ಪಡೆಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮುಂದೆ ಒತ್ತಾಯಿಸಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲು ಮುಂದಾಗಿದೆ. ಆದರೆ, ರೈತರ ಪರ ಮಾತನಾಡುವ ಬಿಜೆಪಿ, ಕೇಂದ್ರದಿಂದ ಹೆಚ್ಚಿನ ನೆರವು ಕೇಳಲು ನಡೆಯುತ್ತಿರುವ ಈ ಸರ್ವಪಕ್ಷ ನಿಯೋಗದಲ್ಲಿ ಭಾಗವಹಿಸಲು ನಿರಾಕರಿಸಿರುವುದು ಅತ್ಯಂತ ವಿಷಾದಕರ ಸಂಗತಿಯಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ರೈತರ ಸಂಕಷ್ಟದ ಬಗ್ಗೆ ಹೊರಗೆ ಕಣ್ಣೀರು ಸುರಿಸುವುದು, ಆದರೆ ರೈತರಿಗಾಗಿ ಕೇಂದ್ರದ ಮುಂದೆ ಒಗ್ಗಟ್ಟಾಗಿ ಧ್ವನಿ ಎತ್ತುವ ಅವಕಾಶ ಬಂದಾಗ ಹಿಂದೆ ಸರಿಯುವುದು ಬಿಜೆಪಿಯ ರೈತಪರ ಕಾಳಜಿಯ ಬಗ್ಗೆ ಪ್ರಶ್ನೆ ಮೂಡಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಲಿ, ಬರದಂತಹ ಸಂಕಷ್ಟದ ಸಂದರ್ಭದಲ್ಲಿ ರೈತರ ಹಿತವೇ ಮೊದಲ ಆದ್ಯತೆಯಾಗಬೇಕು. ಕೇಂದ್ರದಿಂದ ಕರ್ನಾಟಕದ ರೈತರಿಗೆ ಹೆಚ್ಚಿನ ಪರಿಹಾರ ತರುವ ವಿಚಾರದಲ್ಲಿ ಎಲ್ಲ ಪಕ್ಷಗಳೂ ಒಂದಾಗಿ ನಿಲ್ಲಬೇಕು ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ನಿಜವಾಗಿಯೂ ರೈತರ ಪರವಾಗಿದ್ದರೆ, ರಾಜಕೀಯವನ್ನು ಬದಿಗಿಟ್ಟು ಸರ್ವಪಕ್ಷ ನಿಯೋಗದಲ್ಲಿ ಭಾಗವಹಿಸಿ ಕರ್ನಾಟಕದ ರೈತರ ಪರವಾಗಿ ಕೇಂದ್ರ ಸರ್ಕಾರದ ಮುಂದೆ ಧ್ವನಿ ಎತ್ತಬೇಕು. ರೈತರ ಕಣ್ಣೀರಿನ ಸಮಯದಲ್ಲಿ ರಾಜಕೀಯ ಬೇಡ; ರೈತರಿಗಾಗಿ ಒಗ್ಗಟ್ಟಾಗಿ ನಿಲ್ಲೋಣ ಎಂದು ಸಾಗರ್ ಖಂಡ್ರೆ ತಿಳಿಸಿದ್ದಾರೆ.

Tags

Sagar KhandreBJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X