ಬಸವಕಲ್ಯಾಣದಲ್ಲಿ ತಾಲೂಕು ಆಡಳಿತದಿಂದ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ
ಸರ್ದಾರ್ ಪಟೇಲ್ ಭಾವಚಿತ್ರ ಮೆರವಣಿಗೆ, ವಿದ್ಯಾರ್ಥಿಗಳಿಂದ ಪಥಸಂಚಲನ

ಬಸವಕಲ್ಯಾಣ: ನಗರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ತಾಲೂಕು ಆಡಳಿತದ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಉತ್ಸವದ ಅಂಗವಾಗಿ ನಗರದ ಕೋಟೆಯಿಂದ ಆರಂಭವಾದ ಮೆರವಣಿಗೆ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಮಾರ್ಗವಾಗಿ ಬಿಕೆಡಿಬಿ ಸಭಾ ಭವನದ ರಥ ಮೈದಾನದಲ್ಲಿ ಸಮಾರೋಪಗೊಂಡಿತು.
ರಥ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಶರಣು ಸಲಗರ ಅವರ ಸಮ್ಮುಖದಲ್ಲಿ ಸಹಾಯಕ ಆಯುಕ್ತ ಪ್ರಕಾಶ್ ಕುದುರೆ ಧ್ವಜಾರೋಹಣ ನೆರವೇರಿಸಿದರು.
ನಗರದಲ್ಲಿ ಕೋಟೆಯಿಂದ ಬಿಕೆಡಿಬಿ ಸಭಾ ಭವನದವರೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಥಸಂಚಲನ ನಡೆಸಿದರೆ, ಎನ್‌ಸಿಸಿ ವಿದ್ಯಾರ್ಥಿಗಳು ಪರೇಡ್ ಮೂಲಕ ಗೌರವ ಸಲ್ಲಿಸಿದರು.
ಬಳಿಕ ಬಿಕೆಡಿಬಿ ಸಭಾ ಭವನದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ಪ್ರಕಾಶ್ ಕುದುರೆ ಹಾಗೂ ತಹಶೀಲ್ದಾರ್ ದತ್ತಾತ್ರೇಯ ಗಾದಾ ಉತ್ಸವದ ಮಹತ್ವದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಇಓ ರಮೇಶ್ ಸುಲ್ಫಿ, ನಗರಸಭೆ ಪೌರಾಯುಕ್ತ ರಾಜು ಬಣಕಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದಿಲೀಪ್, ಸಿಪಿಐ ಅಲಿಸಾಬ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ರಾಜಕೀಯ ನಾಯಕರು ಭಾಗಿಯಾಗಿದ್ದರು.




