Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಸಾಹಿತ್ಯದ ಒಲವು ಜನವಾಡಕರ್ ಅವರನ್ನು...

ಸಾಹಿತ್ಯದ ಒಲವು ಜನವಾಡಕರ್ ಅವರನ್ನು ಎತ್ತರಕ್ಕೆ ಬೆಳೆಸಿದೆ : ಕುಲಪತಿ ಪ್ರೊ. ಬಿ.ಎಸ್. ಬಿರಾದಾರ್‌

ವಾರ್ತಾಭಾರತಿವಾರ್ತಾಭಾರತಿ18 Oct 2026 7:18 PM IST
share
ಸಾಹಿತ್ಯದ ಒಲವು ಜನವಾಡಕರ್ ಅವರನ್ನು ಎತ್ತರಕ್ಕೆ ಬೆಳೆಸಿದೆ : ಕುಲಪತಿ ಪ್ರೊ. ಬಿ.ಎಸ್. ಬಿರಾದಾರ್‌

ಬೀದರ್ : ಬಾಲ್ಯದಿಂದಲೇ ಸಾಹಿತ್ಯ ರಚನೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಹಿರಿಯ ಸಾಹಿತಿ ಡಾ. ಎಸ್.ಎಂ. ಜನವಾಡಕರ್ ಅವರು, ಚಿಕ್ಕ ವಯಸ್ಸಿನಲ್ಲಿಯೇ ಸೋಲ್ಲಾಪುರದ ಸಿದ್ಧರಾಮೇಶ್ವರರ ಕುರಿತು ಕವನ ರಚಿಸಿದ್ದರು. ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ಅವರು ಇಂದು ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜನರಾಗಿರುವುದು ಹೆಮ್ಮೆಯ ಸಂಗತಿ ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ್‌ ಹೇಳಿದರು.

ನಗರದ ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನ, ಆನಂದ್‌ ಪ್ರಕಾಶನ, ಭಾರತೀಯ ಬೌದ್ಧ ಧಮ್ಮ ಚಾರಿಟೇಬಲ್ ಟ್ರಸ್ಟ್ ಹಾಗೂ ಡಾ. ಎಸ್.ಎಂ. ಜನವಾಡಕರ್ ಅವರ ಹಿತೈಷಿಗಳು ಮತ್ತು ಬಂಧು ಬಳಗದ ಸಂಯುಕ್ತಾಶ್ರಯದಲ್ಲಿ ರವಿವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಾಹಿತ್ಯದ ಬಗ್ಗೆ ಬಾಲ್ಯದಲ್ಲೇ ಒಲವು ಹೊಂದಿದ್ದ ಜನವಾಡಕರ್ ಅವರು ತಮ್ಮ ಬರವಣಿಗೆ ಹಾಗೂ ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಅವರ ಸಾಹಿತ್ಯ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿರುವುದು ಅವರ ಸಾಧನೆಗೆ ಸಂದ ಮನ್ನಣೆಯಾಗಿದೆ ಎಂದರು.

ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟನ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದೇವರು ಮಾತನಾಡಿ, ಜನವಾಡಕರ್ ಅವರು ಯಾವುದೇ ಪ್ರಚಾರದ ಹಂಗಿಲ್ಲದೆ ಮೌನವಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸದ್ದಿಲ್ಲದ ಕ್ರಾಂತಿ ಮಾಡಿದ್ದಾರೆ. ಇಂತಹ ಯೋಗ್ಯ ವ್ಯಕ್ತಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ ಬೀದರ್ ವಿಶ್ವವಿದ್ಯಾಲಯಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಅವರ ಸಾಹಿತ್ಯ ಸೇವೆ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು.

ಬೀದರ್ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಪ್ರೊ. ಪರಮೇಶ್ವರ ನಾಯಕ್ ಮಾತನಾಡಿ, ಬಸವಣ್ಣನವರ ವಚನದಂತೆ ಮಾತು ಮುತ್ತಿನಂತಿರಬೇಕು. ಜನವಾಡಕರ್ ಅವರು ಯಾರೊಂದಿಗೆ ಮಾತನಾಡಿದರೂ ಶಿಸ್ತುಬದ್ಧವಾಗಿ ಮತ್ತು ಸೌಜನ್ಯದಿಂದ ಮಾತನಾಡುತ್ತಾರೆ. ಅವರ ಸರಳತೆ ಹಾಗೂ ಒಳ್ಳೆಯ ಗುಣಗಳಿಂದಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಒಳ್ಳೆಯತನವನ್ನು ಬಯಸುವವರಿಗೆ ಯಾವಾಗಲೂ ಒಳ್ಳೆಯದೇ ಆಗುತ್ತದೆ ಎಂದರು.

ಕನ್ನಡ ಪ್ರಾಧ್ಯಾಪಕ ಡಾ. ರಾಮಚಂದ್ರ ಗಣಾಪೂರ ಅಭಿನಂದನಾ ನುಡಿ ಸಲ್ಲಿಸಿ, ಜನವಾಡಕರ್ ಅವರು ಮೃದು ಮನಸ್ಸಿನ ವ್ಯಕ್ತಿಯಾಗಿದ್ದು, ಸಾಹಿತ್ಯ ಕ್ಷೇತ್ರಕ್ಕೆ ಹಲವು ಮಹತ್ವದ ಕೃತಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಮಾಸಿದ ಹಾಸಿಗೆ, ಕರುಳಿನ ಕತ್ತರಿ, ಬಾಳಿನ ಬಲೆಚೂರು, ಬೌದ್ಧ ಶ್ರೀ ಬೆಡಗಿನ ಬೀದರ್ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ. ಅವರ ಸಾಹಿತ್ಯದಲ್ಲಿ ಜೀವನಾನುಭವ, ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಕಳಕಳಿ ಕಾಣಸಿಗುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಡಾ. ಸಂಜೀವಕುಮಾರ ಅತಿವಾಳೆ ಹಾಗೂ ಸಾಹಿತಿ ಡಾ. ಸುನೀತಾ ಕೂಡ್ಲಿಕರ್ ಮಾತನಾಡಿದರು.

ಕೌಠಾ (ಬಿ) ಬಸವ ಯೋಗಾಶ್ರಮದ ಡಾ. ಸಿದ್ದರಾಮ ಶರಣರು ಬೆಲ್ದಾಳ ಸಾನಿಧ್ಯ ವಹಿಸಿದ್ದರು. ಆಣದೂರಿನ ವೈಶಾಲಿನಗರದ ಧಮ್ಮದರ್ಶನ ಭೂಮಿಯ ಭಂತೆ ವರಜ್ಯೋತಿ ಥೇರೋ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಹಾಲಹಳ್ಳಿಯ (ಕೆ) ದೇವನಾಂಪ್ರಿಯ ಪ್ರಿಯದರ್ಶಿ ಬುದ್ಧವಿಹಾರ ಶಾಂತಿಧಾಮದ ಭಂತೆ ಧಮ್ಮದೀಪ ಸಮ್ಮುಖ ವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವರಾಜ್‌ ಹಾಸನಕರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಅಮೃತರಾವ್‌ ಚಿಮಕೋಡೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್‌ ಚನ್ನಶೆಟ್ಟಿ, ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಡಾ. ಜಗನ್ನಾಥ್‌ ಹೆಬ್ಬಾಳೆ, ಹಿರಿಯ ಮುಖಂಡ ಮಾರುತಿ ಬೌದ್ದೆ, ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠಲದಾಸ್‌ ಪ್ಯಾಗೆ, ನಿವೃತ್ತ ಪ್ರಾಚಾರ್ಯ ಡಿ. ನಿಜಾಮುದ್ದೀನ್ ಸೇರಿದಂತೆ ಹಲವರು ಇದ್ದರು.


Tags

ChancellorProf. B.S. Biradar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X