Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ನೇಹಾ ಹಿರೇಮಠ್ ಕೊಲೆ ಆರೋಪಿಗೆ ಕಠಿಣ...

ನೇಹಾ ಹಿರೇಮಠ್ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ25 April 2024 2:04 PM IST
share
ನೇಹಾ ಹಿರೇಮಠ್ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು : ಸಿಎಂ ಸಿದ್ದರಾಮಯ್ಯ

ಬೀದರ್ : ಹುಬ್ಬಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು

ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ಒತ್ತಾಯ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, "ಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐ ವಹಿಸಿದೆಯೇ?. ನಾನು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪ್ರಕರಣಗಳನ್ನು ಸಿಬಿಐ ಗೆ ವಹಿಸಿದ್ದೇನೆ. ಅವರಿಗೆ ಕೇಳಲು ಯಾವ ನೈತಿಕ ಹಕ್ಕಿದೆ. ಇದರಲ್ಲಿ ರಾಜಕೀಯ ಮಾಡಬಾರದು. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ. ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ" ಎಂದರು.

ನೇಹಾ ಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ

ನೇಹಾ ಕೊಲೆ ಅನ್ಯಾಯವಾದುದು. ಅದನ್ನು ನಾವು ಖಂಡಿಸಿದ್ದೇವೆ. ಇತರೆ ಪಕ್ಷಗಳು ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದರು.

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನರ ಆಸ್ತಿ ಕಸಿದುಕೊಂಡು ಸಂಪತ್ತು ಹಂಚುವ ಬಗ್ಗೆ ಮೋದಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ನೀಡಿರುವ ಭರವಸೆಗಳನ್ನು ಈಡೇರಿಸಿಲ್ಲ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. , 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಗಳನ್ನು ಈಡೇರಿಸಿದರೇ ? ಅಗತ್ಯವಸ್ತುಗಳ ಬೆಲೆಯನ್ನು ಮೋದಿಯವರು ಕಡಿಮೆ ಮಾಡಿದ್ದಾರೆಯೇ ಎಂದು ಸಿಎಂ ಪ್ರಶ್ನಿಸಿದರು.

ಮುಸ್ಲಿಂ ಸಮುದಾಯಕ್ಕೆ ಶೇ.4 ಮೀಸಲಾತಿ ಮುಂದುವರೆದಿದೆ

ಕಾಂಗ್ರೆಸ್ ಪಕ್ಷ ಎಸ್ ಸಿ, ಎಸ್ ಟಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ ಎಂದು ಮೋದಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚಿನ್ನಪ್ಪ ರೆಡ್ಡಿ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮೀಸಲಾತಿ 1994 ರಿಂದ ಜಾರಿಗೆ ಬಂದಿತ್ತು. ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಾಲದಲ್ಲಿ ಈ ಮೀಸಲಾತಿಯನ್ನು ಹಿಂಪಡೆದಿದ್ದಕ್ಕೆ ಈ ವರ್ಗ ಸುಪ್ರಿಂ ಕೋರ್ಟ್ ನ ಮೊರೆ ಹೋಯಿತು. ಆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್ ನ ಮುಂದೆ ಶೇ. 4 ಮೀಸಲಾತಿಯನ್ನು ಮುಂದುವರೆಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದು, ಈ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X