Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಎರಡು ಗುಂಪುಗಳ ನಡುವೆ ಘರ್ಷಣೆ :...

ಎರಡು ಗುಂಪುಗಳ ನಡುವೆ ಘರ್ಷಣೆ : ಹುಲಸೂರಿನಲ್ಲಿ ಬಿಗುವಿನ ವಾತಾವರಣ

ವಾರ್ತಾಭಾರತಿವಾರ್ತಾಭಾರತಿ30 Sept 2026 8:50 PM IST
share
ಎರಡು ಗುಂಪುಗಳ ನಡುವೆ ಘರ್ಷಣೆ : ಹುಲಸೂರಿನಲ್ಲಿ ಬಿಗುವಿನ ವಾತಾವರಣ

ಹುಲಸೂರ್ : ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಂಗಳವಾರ ತಡರಾತ್ರಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಭಜರಂಗದಳದ ಅಧ್ಯಕ್ಷ ಸೇರಿದಂತೆ ಕೆಲವರು ಗಾಯಗೊಂಡಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಬಂದ್ ಆಗಿದ್ದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು.

ಮಾಹಿತಿ ಪ್ರಕಾರ, ಪಟ್ಟಣದ ಮುಖ್ಯ ರಸ್ತೆಯಲ್ಲಿ ಮಂಗಳವಾರ ರಾತ್ರಿ ವ್ಯಾಗನರ್ ಕಾರೊಂದು ಸಂಚರಿಸುತ್ತಿದ್ದ ವೇಳೆ ದ್ವಿಚಕ್ರ ವಾಹನ ಕಾರಿಗೆ ತಗುಲಿದ ಹಿನ್ನೆಲೆಯಲ್ಲಿ ಕಾರು ಚಾಲಕ ಹಾಗೂ ದ್ವಿಚಕ್ರ ವಾಹನ ಸವಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಕೆಲವರು ಕಾರು ಚಾಲಕನೊಂದಿಗೆ ವಾಗ್ವಾದ ನಡೆಸಿದ್ದು, ಸ್ಥಳೀಯರು ಮಧ್ಯಪ್ರವೇಶಿಸಿದ ಸಂದರ್ಭದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎನ್ನಲಾಗಿದೆ.

ಸಮೀಪದ ಅಂಗಡಿ ಬಳಿ ಕೆಲವರ ನಡುವೆ ಕೈಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ತಲುಪಿದ್ದು, ಕಬ್ಬಿಣದ ರಾಡ್ ಸೇರಿದಂತೆ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದ್ದು, ಘಟನೆಯಲ್ಲಿ ಭಜರಂಗದಳದ ಅಧ್ಯಕ್ಷನ ಮುಖ ಹಾಗೂ ಮೂಗಿನ ಭಾಗಕ್ಕೆ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಕೆಲವರಿಗೂ ಗಾಯಗಳಾಗಿರುವುದಾಗಿ ಮಾಹಿತಿ ಇದೆ.

ಘಟನಾ ಸ್ಥಳಕ್ಕೆ ಹುಲಸೂರ್ ಪೊಲೀಸ್ ಠಾಣೆಯ ಪಿಎಸ್‌ಐ ಶಿವಪ್ಪ ಮೇಟಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬಳಿಕ ಡಿವೈಎಸ್ಪಿ ಮಾಡೋಳಪ್ಪ, ಸಿಪಿಐ ಅಲಿಸಾಬ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹುಲಸೂರ್ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಡಿವೈಎಸ್ಪಿ ಮಾಡೋಳಪ್ಪ, ಸಿಪಿಐ ಅಲಿಸಾಬ್ ಹಾಗೂ ಪಿಎಸ್‌ಐ ಶಿವಪ್ಪ ಮೇಟಿ ನೇತೃತ್ವದ ಪೊಲೀಸರು ಕೆಲವರನ್ನು ವಿಚಾರಣೆಗಾಗಿ ಬಸವಕಲ್ಯಾಣಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ. ಸಾರ್ವಜನಿಕರು ಅನಗತ್ಯವಾಗಿ ಗುಂಪುಗೂಡದಂತೆ ಪೊಲೀಸರು ಸೂಚಿಸಿದ್ದಾರೆ. ಸದ್ಯ ಪಟ್ಟಣದ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags

Hulasur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X