Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. 2,025 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ,...

2,025 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡಿದ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 April 2025 11:05 PM IST
share
2,025 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೀದರ್ : ಕರ್ನಾಟಕ್ಕೆ ಮುಕುಟವಾಗಿರುವ ಬೀದರ್‌ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2,,025 ಕೋಟಿ ರೂ. ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಗುಂಡಿ ಒತ್ತುವ ಮೂಲಕ ನೆರವೇರಿಸಿದರು.

ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ನೆಹರು ಕ್ರೀಡಾಂಗಣದಲ್ಲಿ 2,025 ಕೋಟಿ ರೂ.ಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರಕಾರವು ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಜೊತೆಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಸಹ ಕೈಗೊಳ್ಳಲಾಗುತ್ತಿದೆ. ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಇಲ್ಲ ಎಂದು ಇಂದು ಜರುಗಿದ ಈ ಕಾರ್ಯಕ್ರಮವೇ ಇದಕ್ಕೆ ಉದಾಹರಣೆಯಾಗಿದೆ ಎಂದು ಹೇಳಿದರು.

ಪಂಚ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಆರ್ಥಿಕ ದಿವಾಳಿಯಾಗುತ್ತದೆ. ಈ ಗ್ಯಾರಂಟಿಗಳು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ನನ್ನ ಮತ್ತು ನಮ್ಮ ಸರ್ಕಾರವನ್ನು ಪ್ರತಿಪಕ್ಷ ಬಿಜೆಪಿಯು ಟೀಕಿಸಿತ್ತು. ಅವರ ಟೀಕೆಗಳ ಹೊರತಾಗಿಯೂ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಾಗಿದೆ. ಇವಾಗ 2,025 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ಇದರಿಂದಾಗಿ ಪಂಚ ಗ್ಯಾರಂಟಿಗಳಿಂದ ನಷ್ಟವಾಗುತ್ತಿಲ್ಲ, ಅಭಿವೃದ್ಧಿಯಾಗುತ್ತಿದೆ ಎಂದು ಗೊತ್ತಾಗುತ್ತದೆ ಎಂದು ಪ್ರತಿಪಕ್ಷಕ್ಕೆ ಬಿಜೆಪಿ ವಿರುದ್ಧ ಹರಿಹಾಯ್ದರು.

ಪ್ರತಿ ವರ್ಷ 52 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ರಾಜ್ಯವನ್ನು ಸಾಮಾಜಿಕ, ಆರ್ಥಿಕವಾಗಿ ಸಮತೋಲನದ ಹಾದಿಯಲ್ಲಿ ಮುನ್ನಡೆಸುವ ಕಾಳಜಿಯುಳ್ಳ ಬೃಹತ್ ಮೊತ್ತದ ಬಜೆಟನ್ನು ಈ ವರ್ಷ ಮಂಡಿಸಲಾಗಿದೆ. ಒಟ್ಟು 4 ಲಕ್ಷ 9 ಸಾವಿರ ಕೋಟಿ ರೂ. ಮೊತ್ತದ ಬಜೆಟ್‌ನ್ನು ಮಂಡಿಸಲಾಗಿದೆ. ಕಳೆದ ವರ್ಷ ಕ್ಯಾಪಿಟಲ್ ಖರ್ಚು ಮಾಡಿದ್ದು 26 ಸಾವಿರ ಕೋಟಿ ರೂ., ಈ ವರ್ಷ 83 ಸಾವಿರ ಕೋಟಿ ರೂ, ಆಗಿದೆ. ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ಬದುಕಿನಲ್ಲಿ ಒಂದಲ್ಲ ಒಂದು ರೀತಿಯ ಬದಲಾವಣೆ, ಸುಧಾರಣೆ ತಂದಿರುವುದಲ್ಲದೆ ಆರ್ಥಿಕ ಸಂಚಲನವನ್ನು ಸಹ ದೊಡ್ಡ ಮಟ್ಟದಲ್ಲಿ ಸೃಷ್ಟಿಸಿದೆ. ಜಿ.ಎಸ್.ಟಿ. ಸಂಗ್ರಹದಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದರು.

ಇವಾಗ ಬಿಜೆಪಿಯವರು ಬೆಲೆ ಏರಿಕೆ ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ ಸಭೆ ಮಾಡಲು ನಿರ್ಧರಿಸಿದ್ದಾರೆ. ಆದರೆ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಸರಕಾರವಾಗಿದೆ. ಇವಾಗ ಪೆಟ್ರೋಲ್ ದರ ನೂರರ ಗಡಿ ದಾಟಿದೆ. ಡೀಸೆಲ್ ದರ 90 ರ ಗಡಿ ದಾಟಿದೆ ಹಾಗೆಯೇ ಮೊನ್ನೆಯಷ್ಟೇ ಗ್ಯಾಸ್ ಬೆಲೆ ಒಮ್ಮೆಲೇ 50 ರೂ. ಹೆಚ್ಚಳ ಮಾಡಿದ್ದಾರೆ.ಇದೆಲ್ಲ ಬಿಜೆಪಿಯವರು ತಿಳಿದುಕೊಳ್ಳಬೇಕು ಎಂದು ಕುಟುಕಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿ, ಬೀದರ್ ಜಿಲ್ಲೆಗೆ ಸಚಿವ ಈಶ್ವರ್ ಖಂಡ್ರೆ ಅವರು ಬಂಪರ್ ಕೊಡುಗೆ ಪಡೆದಿದ್ದಾರೆ. ಇಂದು ಐತಿಹಾಸಿಕ ದಿನವಾಗಿದೆ. ಈ ಭಾಗದ ನೀರಾವರಿ ಯೋಜನೆಗಳಿಂದ ಸಾವಿರಾರು ಎಕರೆ ಭೂಮಿಗೆ ನೀರು ಒದಗಲಿದೆ. ಕುಡಿಯುವ ನೀರು, ತಲೆಮೇಲೆ ಸೂರು ಶಿಕ್ಷಣ ಹಾಗೂ ಉದ್ಯೋಗ ಸೃಷ್ಠಿಯೇ ನಮ್ಮ ಸರಕಾರದ ಉದ್ದೇಶ. ಬಸವಣ್ಣನ ಈ ನಾಡಿನಲ್ಲಿ ಕಾಯಕ ಹಾಗೂ ಕೃಷಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

2,025 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯ ಇಂದಿನ ಕಾರ್ಯಕ್ರಮ ಬೀದರ್ ಇತಿಹಾಸದಲ್ಲಿಯೇ ದಾಖಲೆಯಾಗಿದೆ. ಅಭಿವೃದ್ಧಿ ಪರ್ವಕ್ಕೆ ನಾಂದಿಯಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371(ಜೆ) ಜಾರಿ ಮಾಡಿ 5 ಸಾವಿರ ಕೋಟಿ ರೂ. ಮೀಸಲಿಟ್ಟು ಎಲ್ಲ ವರ್ಗದ ಜನರ ಏಳ್ಗೆಗೆ ಸರಕಾರ ಶ್ರಮಿಸುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಮಾತನಾಡಿ, 2,025 ಕೋಟಿ ರೂ. ಯೋಜನೆಯ ಈ ದಿನ ಜಿಲ್ಲೆಗೆ ಐತಿಹಾಸಿಕ ದಿನವಾಗಿದೆ. ಉಡಾನ್ ಯೋಜನೆಯಡಿ ನೀಡುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರ್ಕಾರ 3 ವರ್ಷದ ಬಳಿಕ ನಿಲ್ಲಿಸಿದ ಕಾರಣ ಬೀದರ್ ನಾಗರಿಕ ವಿಮಾನಯಾನ ಸೇವೆ ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿತ್ತು. ಹೀಗಾಗಿ ಬೀದರ್ ಜನರು, ವ್ಯಾಪಾರಸ್ಥರು, ಸಾಫ್ಟವೇರ್ ಉದ್ಯಮಿಗಳು, ಪ್ರವಾಸಿಗರು ವಿಮಾನ ಹತ್ತಲು ಹೈದ್ರಾಬಾದ್ ಗೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಈಗ ರಾಜ್ಯ ಸರ್ಕಾರವೇ ಸಬ್ಸಿಡಿ ನೀಡಿ ವಿಮಾನಯಾನ ಸೇವೆ ಆರಂಭಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರಂಜಾ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಘೋಸಿಸುವ ಮೂಲಕ ಪರಿಹಾರ ಒದಗಿಸಬೇಕು. ಅನುಭವ ಮಂಟಪಕ್ಕೆ ಅವಶ್ಯಕವಿರುವ ಅನುದಾನ ಬಿಡುಗಡೆ ಮಾಡಿ ಮುಂದಿನ ವರ್ಷದ ಎಪ್ರಿಲ್ ನಲ್ಲಿ ಲೋಕಾರ್ಪಣೆ ಮಾಡಬೇಕು. ಬೀದರ್ ವಿಶ್ವವಿದ್ಯಾಲಯಕ್ಕೆ ಅನುದಾನ ನೀಡಿ ಅದಕ್ಕೊಂದು ಆಡಳಿತ ಸೌಧ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಬೇಡಿಕೆ ಇಟ್ಟರು.

ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ಅವರು ಮಾತನಾಡಿ, ಪ್ರತಿಪಕ್ಷಗಳು ಸರಕಾರದಲ್ಲಿ ಹಣ ಇಲ್ಲ ಎಂದು ಟೀಕಿಸುತ್ತಾರೆ. ಆದರೆ ಇಂದು ಜರುಗಿದ 2,025 ಕೋಟಿ ರೂ. ಕಾರ್ಯಕ್ರಮ ಅಬಿವೃದ್ಧಿಗೆ ಸಾಕ್ಷಿಯಾಗಿದೆ. ಸುಳ್ಳು ಆರೋಪಿಗಳು ಮಾಡುವವರು ಮಾಡಲಿ ಕಳೆದ ವರ್ಷ ತಮ್ಮ ಬೀದರ್‌ ಕ್ಷೇತ್ರಕ್ಕೆ 1,500 ಕೋಟಿ ರೂ. ಮುಖ್ಯಮಂತ್ರಿಗಳು ನೀಡಿದ್ದಾರೆ. 50 ಕೋಟಿ ರೂ.ಗಳ 100 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲಾಗಿದೆ. ಈವಾಗ ಬ್ರಿಮ್ಸ್ ಅಭಿವೃದ್ಧಿಗೆ 15 ಕೋಟಿ ರೂ. ನೀಡಿದ್ದಾರೆ. ನಗರಾಭಿವೃದ್ಧಿಗೆ , ಒಳಚರಂಡಿಗೆ ನೂರಾರು ಕೋಟಿ ನೀಡಿದ್ದಾರೆ. ಕಳೆದ 2 ವರ್ಷಗಳಲ್ಲಿ ಒಟ್ಟು 700 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಪ್ರತಿಪಕ್ಷಗಳ ಟೀಕೆ ವಿರುದ್ಧ ಗುಡುಗಿದರು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹೊರತಂದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಕಿರುಹೊತ್ತಿಗೆ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಸಂಸದ ಸಾಗರ್ ಖಂಡ್ರೆ, ಮಾಜಿ ಸಚಿವ ರಾಜಶೇಖರ್ ಪಾಟೀಲ್, ಮಾಜಿ ಶಾಸಕ ಅಶೋಕ್ ಖೇಣಿ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಪಾಟೀಲ್, ಭೀಮರಾವ್ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರವಿಂದ್ ಅರಳಿ, ವಿಜಯಸಿಂಗ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಕರ್ನಾಟಕ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಎಂ.ಎ.ವಾನತಿ ಸೇರಿದಂತೆ ಜಿಲ್ಲೆಯ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X