ಬೀದರ್ | ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರ ನೇಮಕಾತಿ ರದ್ದುಪಡಿಸಲು ಸಿಎಂಗೆ ಶಂಕರರಾವ್ ಪತ್ರ

ಬೀದರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಶಶಿಧರ್ ಕೋಸಂಬೆ ಅವರನ್ನು ನೇಮಕ ಮಾಡಿದ ರಾಜ್ಯ ಸರಕಾರದ ತೀರ್ಮಾನವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಂಕರರಾವ್ ದೊಡ್ಡಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಶಶಿಧರ್ ಕೋಸಂಬೆ ಅವರು ಬಿಜೆಪಿ ಪಕ್ಷದವರಲ್ಲದೇ ಆರೆಸ್ಸೆಸ್ ಕಾರ್ಯಕರ್ತರಾಗಿದ್ದಾರೆ. ಇವರನ್ನು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ನೂತನ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಶಶಿಧರ್ ಕೋಸಂಬೆ ಅವರನ್ನು ಕೂಡಲೇ ಹಂಗಾಮಿ ಅಧ್ಯಕ್ಷರನ್ನಾಗಿ ಮಾಡಿರುವ ನೇಮಕಾತಿ ಆದೇಶವನ್ನು ರದ್ದುಗೊಳಿಸಿ, ಕಾಂಗ್ರೆಸ್ ಚಿಂತನೆ ಹೊಂದಿರುವ ಹಾಗೂ ಸಂಘಟನೆ ಮೂಲಕ ಬದ್ಧತೆಯಿಂದ ಕೆಲಸ ಮಾಡಿದ ವ್ಯಕ್ತಿಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಶಂಕರರಾವ್ ದೊಡ್ಡಿ ಒತ್ತಾಯಿಸಿದ್ದಾರೆ.
Next Story





