Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಸಮುದಾಯದ ಪ್ರೀತಿ, ವಿಶ್ವಾಸ ನನ್ನ...

ಸಮುದಾಯದ ಪ್ರೀತಿ, ವಿಶ್ವಾಸ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ : ಎನ್.ಎ.ಹಾರಿಸ್

ವಾರ್ತಾಭಾರತಿವಾರ್ತಾಭಾರತಿ8 Oct 2026 5:18 PM IST
share
ಸಮುದಾಯದ ಪ್ರೀತಿ, ವಿಶ್ವಾಸ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ : ಎನ್.ಎ.ಹಾರಿಸ್

ಬೀದರ್: ‘ಕರ್ನಾಟಕ ಅಲ್ಪಸಂಖ್ಯಾತ ಶಾಸಕರ ವೇದಿಕೆ’ ವತಿಯಿಂದ ಮಂಗಳವಾರ ಬೀದರ್ ನಗರದಲ್ಲಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಹಾಗೂ ಶಾಸಕ ಎನ್.ಎ.ಹಾರಿಸ್ ಪಾಲ್ಗೊಂಡು ಅಭಿನಂದನೆ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಅವರು, ಸೌಹಾರ್ದತೆ ಹಾಗೂ ಸಹಬಾಳ್ವೆಯ ನೆಲೆಯಾಗಿರುವ ಬೀದರ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಪ್ರತಿನಿಧಿಗಳು ನೀಡಿದ ಗೌರವ ಮತ್ತು ಪ್ರೀತಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕರ್ನಾಟಕದಾದ್ಯಂತ ಅಲ್ಪಸಂಖ್ಯಾತ ಸಮುದಾಯವನ್ನು ಪ್ರತಿನಿಧಿಸುವ ಶಾಸಕರ ವೇದಿಕೆಯು ಆತ್ಮೀಯತೆಯಿಂದ ಬೀದರ್‌ಗೆ ಆಹ್ವಾನಿಸಿ ಸನ್ಮಾನಿಸಿರುವುದು ತಮ್ಮ ರಾಜಕೀಯ ಜೀವನದ ಪ್ರಮುಖ ಕ್ಷಣಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಈ ಸನ್ಮಾನವನ್ನು ಕೇವಲ ಅಭಿನಂದನೆಯಾಗಿ ಸ್ವೀಕರಿಸುವುದಿಲ್ಲ. ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿ, ಹಕ್ಕುಗಳ ರಕ್ಷಣೆ ಹಾಗೂ ಸಮುದಾಯದಲ್ಲಿ ಒಗ್ಗಟ್ಟು ಮತ್ತು ಪ್ರಗತಿಗಾಗಿ ಇನ್ನಷ್ಟು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಹೊಣೆಗಾರಿಕೆಯಾಗಿ ಸ್ವೀಕರಿಸುತ್ತೇನೆ ಎಂದು ಅವರು ತಿಳಿಸಿದರು.

ತಮಗೆ ನೀಡಿರುವ ಈ ಗೌರವ ಕೇವಲ ವೈಯಕ್ತಿಕ ಗೌರವವಲ್ಲ. ಇದು ಪ್ರತಿಯೊಬ್ಬ ಶ್ರಮಜೀವಿಗೆ, ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೆ, ಸಮುದಾಯದ ಪ್ರತಿಯೊಬ್ಬ ವ್ಯಕ್ತಿಗೆ ಹಾಗೂ ತಮ್ಮ ಆತ್ಮೀಯ ಅಲ್ಪಸಂಖ್ಯಾತ ಶಾಸಕ ಮಿತ್ರರಿಗೆ ಸಂದ ಗೌರವವಾಗಿದೆ ಎಂದು ಅಭಿಪ್ರಾಯಪಟ್ಟರು.

“ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ನಂಬಿಕೆಯನ್ನು ಎಂದಿಗೂ ಮರೆಯುವುದಿಲ್ಲ. ನನ್ನ ಸಾರ್ವಜನಿಕ ಜೀವನದುದ್ದಕ್ಕೂ ಅಲ್ಪಸಂಖ್ಯಾತ ಸಮುದಾಯದ ದನಿಯಾಗಿ, ಅವರ ಹಿತಾಸಕ್ತಿಗಳಿಗಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ. ಸಮುದಾಯದ ಅಭಿವೃದ್ಧಿ ಮತ್ತು ಸರ್ವರಿಗೂ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತೇನೆ” ಎಂದು ಅವರು ಭರವಸೆ ನೀಡಿದರು.

“ನಿಮ್ಮೆಲ್ಲರ ಆಶೀರ್ವಾದವೇ ನನ್ನ ಅತಿ ದೊಡ್ಡ ಶಕ್ತಿ. ಈ ಆತ್ಮೀಯ ಸನ್ಮಾನ ಹಾಗೂ ಗೌರವಕ್ಕೆ ಪಾತ್ರವಾಗಿಸಿದ ಕರ್ನಾಟಕ ಅಲ್ಪಸಂಖ್ಯಾತ ಶಾಸಕರ ವೇದಿಕೆಯ ಎಲ್ಲಾ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಮುದಾಯದ ಬಂಧುಗಳಿಗೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದ ಎನ್.ಎ.ಹಾರಿಸ್ ಅವರು ಕಾಂಗ್ರೆಸ್ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಧಾರ್ಮಿಕ ನಾಯಕರನ್ನು ಭೇಟಿ ಮಾಡಿದರು. ಈ ವೇಳೆ ಹಲವು ಶ್ರದ್ಧಾ ಕೇಂದ್ರಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ :

ಮಂಗಳವಾರ ಬೀದರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಎನ್.ಎ.ಹಾರಿಸ್ ಅವರಿಗೆ ಯುವ ಕಾಂಗ್ರೆಸ್ ಹಾಗೂ ಬೀದರ್ ಜನರಿಂದ ಅದ್ಧೂರಿ ಸ್ವಾಗತ ದೊರೆಯಿತು. ಮೊದಲಿಗೆ ಸಿಖ್ ಧರ್ಮದ ಪವಿತ್ರ ಯಾತ್ರಾ ಕೇಂದ್ರ ಗುರುನಾನಕ್ ಝೀರಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸೆಂಟ್ ಪೌಲ್ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್‌ಗೆ ತೆರಳಿ, ಚರ್ಚ್‌ನ ಧಾರ್ಮಿಕ ಮುಖಂಡರು ಹಾಗೂ ಸಮುದಾಯದ ಪ್ರಮುಖರೊಂದಿಗೆ ಮಾತುಕತೆ ನಡೆಸಿದರು.

ಬೀದರ್ ನಗರದ ಶಾಹೀನ್ ಗ್ರೂಪ್ ಶಿಕ್ಷಣ ಸಂಸ್ಥೆಗೆ ತೆರಳಿ, ಸಮೂಹದ ಮುಖ್ಯಸ್ಥರು ಸೇರಿದಂತೆ ಹಲವರೊಂದಿಗೆ ಚರ್ಚಿಸಿದರು. ಬಳಿಕ ನಗರದ ಮಣಿಯಾರ್ ತಾಲೀಮ್‌ನಲ್ಲಿರುವ ಜಾಮಿಯಾ ಇಸ್ಲಾಮಿಯಾ ಮದೀನತ್ ಉಲ್ ಉಲೂಮ್‌ಗೆ ಭೇಟಿ ನೀಡಿ, ಮದರಸಾ ಪ್ರತಿನಿಧಿಗಳು ಮತ್ತು ಉಲೇಮಾಗಳೊಂದಿಗೆ ಸಂವಾದ ನಡೆಸಿದರು.

ಬೀದರ್‌ನ ಹೀಲಿಂಗ್ ಟ್ರೀ ಆಸ್ಪತ್ರೆಯಲ್ಲಿ ಸರ್ಕಾರೇತರ ಸಂಸ್ಥೆಗಳು, ಸಾಮಾಜಿಕ ಸಂಘಟನೆಗಳು, ಶಿಕ್ಷಣ ತಜ್ಞರು ಹಾಗೂ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದರ ಜೊತೆಗೆ ಬೀದರ್‌ನ ಉರ್ದು ಮಾಧ್ಯಮ ಹಾಗೂ ಪತ್ರಿಕಾ ಮಿತ್ರರನ್ನು ಭೇಟಿಯಾಗಿ ಮಾತನಾಡಿದರು.

ನೂತನವಾಗಿ ಆರಂಭಗೊಂಡ ಆರ್ವಿತಾ ಆಸ್ಪತ್ರೆಯ ಶುಭಾರಂಭ ಸಮಾರಂಭದಲ್ಲಿ ಪಾಲ್ಗೊಂಡು, ಆಸ್ಪತ್ರೆಯ ಮಾಲಕರು ಹಾಗೂ ಆಡಳಿತ ಮಂಡಳಿಗೆ ಶುಭ ಕೋರಿದರು. ಮಂಗಳವಾರ ಸಂಜೆ ಅಲ್ಪಸಂಖ್ಯಾತ ಶಾಸಕರ ವೇದಿಕೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಿ ಸನ್ಮಾನ ಸ್ವೀಕರಿಸಿದರು. ನಂತರ ಸರ್ವಧರ್ಮ ಸಮನ್ವಯದ ಪ್ರತೀಕವಾದ ಹಝರತ್ ಮುಲ್ತಾನಿ ಬಾದ್‌ಷಾ ದರ್ಗಾಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಮನ್ನಾಖಲಿ ಅಂಬೇಡ್ಕರ್ ವೃತ್ತದಲ್ಲಿ ನಡೆದ ಯುವ ಕಾಂಗ್ರೆಸ್ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಕಲಬುರಗಿಯತ್ತ ಪ್ರಯಾಣ ಬೆಳೆಸಿದರು.

ಕಲಬುರಗಿಯಲ್ಲಿ ಮುಖಂಡರ ಭೇಟಿ :

ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ ಅವರ ನಿವಾಸಕ್ಕೆ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಪಾಲಿಕೆ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಅವರನ್ನು ಭೇಟಿ ಮಾಡಿ, ವಕ್ಫ್ ಆಸ್ತಿ ರಕ್ಷಣೆ ಹಾಗೂ ಸಮುದಾಯದ ಪರವಾಗಿ ಆಗಬೇಕಿರುವ ಕೆಲಸಗಳ ಕುರಿತು ಚರ್ಚಿಸಿದರು.

ಬಳಿಕ ಕಲಬುರಗಿ ನಗರದ ಪ್ರಸಿದ್ಧ ಹಾಗೂ ಐತಿಹಾಸಿಕ ಖ್ವಾಜಾ ಬಂದೇ ನವಾಝ್ ದರ್ಗಾಕ್ಕೆ ತೆರಳಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕರ್ನಾಟಕ ಅಲ್ಪಸಂಖ್ಯಾತ ಶಾಸಕರ ವೇದಿಕೆಯ ಜಂಟಿ ಕಾರ್ಯದರ್ಶಿಯೂ ಆಗಿರುವ ಬಲ್ಕಿಸ್ ಬಾನು ಹಾಜರಿದ್ದರು.

ಕಲಬುರಗಿ ದರ್ಗಾ ಆವರಣದಲ್ಲಿರುವ ಅಖಿಲ ಭಾರತ ಸೈಯದ್‌ ಮುಹಮ್ಮದ್ ಗಿಸುದಿರಸ್ ಸಂಶೋಧನಾ ಅಕಾಡೆಮಿಗೆ ತೆರಳಿ, ಅಲ್ಲಿನ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು. ಮಾಜಿ ಸಚಿವ ರಹೀಮ್ ಖಾನ್, ಶಾಸಕಿ ಖನೀಜ್ ಫಾತಿಮಾ, ಎಂಎಲ್‌ಸಿ ಬಲ್ಕಿಸ್ ಬಾನು ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.

Tags

N.A.Harristrust
share
ವಾರ್ತಾಭಾರತಿ
ವಾರ್ತಾಭಾರತಿ
Next Story
X