ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ED ದಾಳಿ ಖಂಡಿಸಿ ದಲಿತ ಸೇನೆ ವತಿಯಿಂದ ಪ್ರತಿಭಟನೆ

ಹುಮನಾಬಾದ್ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ED ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಖಂಡಿಸಿ ದಲಿತ ಸೇನೆ ತಾಲೂಕು ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಡಾ. ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ, ದಲಿತ ಸೇನೆಯ ಕಾರ್ಯಕರ್ತರು ಬ್ಯಾನರ್ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ನಡೆಯುತ್ತಿರುವ ED ತನಿಖೆಯು ದ್ವೇಷದ ರಾಜಕಾರಣವಾಗಿದ್ದು, ಕೂಡಲೇ ಇಂತಹ ರಾಜಕೀಯ ಪ್ರೇರಿತ ದಾಳಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ. ಇದು ಸಂವಿಧಾನ ವಿರೋಧಿ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ದಲಿತ ಸೇನೆಯ ತಾಲೂಕಾಧ್ಯಕ್ಷ ವೀರಪ್ಪಾ ಧುಮ್ಮನಸೂರ್, ಅಶೋಕ್ ಗೌರೆ, ಮಲ್ಲಿಕಾರ್ಜುನ್ ಮಹೇಂದ್ರಕುಮಾರ್, ಪ್ರಫುಲ್ ಗಾಯಕ್ವಾಡ್, ಅಶೋಕ್ ಸಿಂದೆ, ಮಾಣಿಕ್ ಪವರ್, ಸಂಜು ಕಿಣ್ಣಿ ಹಾಗೂ ಜೈಭೀಮ್ ಕನ್ನಕಟ್ಟಾ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.




