ಬೀದರ್: 10ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಪಾಠ ಮಾಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್: ನಗರದ ನೌಬಾದ್ ನಲ್ಲಿರುವ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಗಣಿತ ಪಾಠ ಮಾಡಿದರು.
ಮಾ.21 ರಿಂದ ಜರುಗಲಿರುವ ಎಸೆಸೆಲ್ಸಿ ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಪ್ರಸ್ತುತ ಶೈಕ್ಷಣಿಕ ಚಟುವಟಿಕೆಯನ್ನು ವೀಕ್ಷಿಸಲು ಇಂದು ನೌಬಾದ್ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಮಕ್ಕಳ ಅಭ್ಯಾಸ ಕ್ರಮವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಗಣಿತ ವಿಷಯದ ಕುರಿತು ಸಂವಾದ ನಡೆಸಿದ ಅವರು, ಇಲ್ಲಿವರೆಗೆ ಕಲಿತ ಗಣಿತ ಪ್ರಶ್ನೆಗಳು ಬಿಡಿಸುವಂತೆ ವಿದ್ಯಾರ್ಥಿಗಳಿಗೆ ಹೇಳಿದಾಗ ಒಂದೇರಡು ಪ್ರಶ್ನೆಗಳನ್ನು ಸರಾಗವಾಗಿ ಬಿಡಿಸಿದರು. ನಂತರ ಗಣಿತ ಪಠ್ಯಕ್ರಮದ ಒಂದೆರಡು ಪಾಠಗಳನ್ನು ಅವರು ವಿದ್ಯಾರ್ಥಿಗಳಿಗೆ ಬೋಧಿಸಿದರು. ವಿದ್ಯಾರ್ಥಿಗಳಿಗೆ ಇನ್ನು ಹೆಚ್ಚಿನ ತರಬೇತಿ ಹಾಗೂ ವಾರಕ್ಕೊಮ್ಮೆ ನಿರಂತರ ಪರೀಕ್ಷೆ ಕೈಗೊಳ್ಳುವಂತೆ ಬಿಇಓ ಡಾ.ಬಿ.ಆರ್.ದೊಡ್ಡೆ ಅವರಿಗೆ ಸೂಚಿಸಿದರು.
ಈಗಾಗಲೇ ಡಿಸೆಂಬರ ತಿಂಗಳಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣಗೊಂಡಿದ್ದು, ಉಳಿದ ಮೂರು ತಿಂಗಳಲ್ಲಿ ಪಠ್ಯಕ್ರಮ ಪುನರಾವರ್ತನೆ ಹಾಗೂ ಪಾಸಿಂಗ್ ಪ್ಯಾಕೇಜ್ ನಿಟ್ಟಿನಲ್ಲಿ ವಿಶೇಷ ತರಗತಿಗಳು ನಿರಂತರವಾಗಿ ಬೋಧಿಸಲಾಗುತ್ತಿದೆ. ಸದ್ಯ ಬೀದರ್ ನಲ್ಲಿ ಸುಮಾರು 8 ಸಾವಿರ ವಿದ್ಯಾರ್ಥಿಳು ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ಟಿ. ಆರ್. ದೊಡ್ಡೆ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು