ಹುಲಸೂರಿನಲ್ಲಿ ಬಾಲಕಿ ಮೃತ್ಯು : ಸಚಿವ ಈಶ್ವರ್ ಖಂಡ್ರೆ ಸಂತಾಪ

ಬೀದರ್ : ಜಿಲ್ಲೆಯ ಹುಲಸೂರಿನ ಕೆಜಿಎನ್ ಕಾಲೋನಿಯಲ್ಲಿ ಮಳೆ ಅನಾಹುತಕ್ಕೆ 6 ವರ್ಷದ ಬಾಲಕಿ ಮೃತಪಟ್ಟಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಸಂತಾಪ ಸೂಚಿಸಿದ್ದಾರೆ.
ಮಂಗಳವಾರ ಸಾಯಂಕಾಲ ಸುರಿದ ಭಾರಿ ಆಲಿಕಲ್ಲು ಮಳೆಯಿಂದಾಗಿ ತಗಡುಗಳು ಹಾರಿಹೋಗಿ, ಮೇಲಿಟ್ಟಿದ್ದ ಕಲ್ಲು ಬಿದ್ದು ಬಾಲಕಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಈ ದುಃಖದ ಸಂದರ್ಭದಲ್ಲಿ ಸರ್ಕಾರ ಕುಟುಂಬದ ಜೊತೆ ನಿಲ್ಲುತ್ತದೆ. ಕುಟುಂಬದವರಿಗೆ ನಿಯಮಾನುಸಾರ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆ ಬೀಳುತ್ತಿದ್ದು, ಸಾರ್ವಜನಿಕರು ಸುರಕ್ಷತೆಯಿಂದ ಇರುವಂತೆ ಅವರು ಮನವಿ ಮಾಡಿದ್ದಾರೆ.
Next Story




