Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್ (ಬಿ), ಕಮಲನಗರ ತಾಲೂಕುಗಳನ್ನು...

ಔರಾದ್ (ಬಿ), ಕಮಲನಗರ ತಾಲೂಕುಗಳನ್ನು ಅತಿವೃಷ್ಠಿ ಪ್ರದೇಶಗಳೆಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಶಾಸಕ ಪ್ರಭು ಚೌವ್ಹಾಣ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ19 Aug 2025 7:19 PM IST
share
ಔರಾದ್ (ಬಿ), ಕಮಲನಗರ ತಾಲೂಕುಗಳನ್ನು ಅತಿವೃಷ್ಠಿ ಪ್ರದೇಶಗಳೆಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಶಾಸಕ ಪ್ರಭು ಚೌವ್ಹಾಣ್ ಒತ್ತಾಯ

ಬೀದರ್ : ಔರಾದ್ (ಬಿ) ಮತ್ತು ಕಮಲನಗರ ತಾಲ್ಲೂಕುಗಳನ್ನು ಅತಿವೃಷ್ಠಿ ಪ್ರದೇಶಗಳೆಂದು ಘೋಷಿಸಿ, ಹಾನಿಗೊಳಗಾದ ಜನತೆಗೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪ್ರಭು ಚೌವ್ಹಾಣ್ ಅವರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅವರು, ಔರಾದ್ (ಬಿ) ವಿಧಾನಸಭಾ ಕ್ಷೇತ್ರದಲ್ಲಿ ಅತಿವೃಷ್ಠಿಯಿಂದ ಉಂಟಾಗಿರುವ ಹಾನಿಯ ಬಗ್ಗೆ ಮನವರಿಕೆ ಮಾಡಿದ್ದಾರೆ. ಕೆಲ ದಿನಗಳಿಂದ ನಿರಂತರ ಧಾರಾಕಾರ ಮಳೆಯಾಗುತ್ತಿದೆ. ರವಿವಾರ ಒಂದೇ ದಿನ ಎರಡು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಸುಮಾರು 300 ಎಂಎಂ ಮಳೆ ದಾಖಲಾಗಿದೆ. ಪ್ರತಿ ವರ್ಷ ಬರಗಾಲ ಆವರಿಸುವ ಕ್ಷೇತ್ರದಲ್ಲಿ ಈ ಬಾರಿ ಸುರಿದ ಮಳೆಯ ಪ್ರಮಾಣವು ಸಾಮಾನ್ಯ ಮಿತಿ ಮೀರಿದ್ದು, ಬಿತ್ತನೆಯಾದ ಸೋಯಾಬೀನ್, ಉದ್ದು, ಹೆಸರು, ಜೋಳ, ಹತ್ತಿ ಮುಂತಾದ ಪ್ರಮುಖ ಕೃಷಿ ಬೆಳೆಗಳು ನೀರುಪಾಲಾಗಿವೆ. ಸಾವಿರಾರು ಹೆಕ್ಟೇರ್ ಬೆಳೆ ನಷ್ಟವಾಗಿದೆ. 100ಕ್ಕೂ ಮೇಲ್ಪಟ್ಟು ರೈತರ ಜಾನುವಾರುಗಳು ಸಾವನಪ್ಪಿವೆ ಎಂದು ತಿಳಿಸಿದ್ದಾರೆ.

ರೈತರು ಸಾಲ ಮಾಡಿ ಬೆಳೆದ ಬೆಳೆಗಳು ನೆಲಸಮವಾಗಿ ನಾಶವಾಗಿದ್ದು, ಅವರ ಜೀವನ ಭವಿಷ್ಯ ಗೊಂದಲಕ್ಕೆ ತಳ್ಳಲ್ಪಟ್ಟಿದೆ. ಗ್ರಾಮಗಳು ಜಲಾವೃತ್ತಗೊಂಡು ಸುಮಾರು 50 ಕ್ಕೂ ಹೆಚ್ಚು ಮನೆಗಳು ಕುಸಿದು ಕುಟುಂಬಗಳು ಬೀದಿಗೆ ಬಂದಿವೆ. ಅಷ್ಟೇಯಲ್ಲದೆ, ನಂದಿ ಬಿಜಲಗಾಂವ್, ಚಿಕ್ಲಿ ನಡುವಿನ ಸೇತುವೆ, ಸಾವರಗಾಂವ್, ಹಂಗರಗಾ ನಡುವಿನ ಸೇತುವೆ ಸೇರಿ ಹಲವು ಸೇತುವೆ, ಕೆರೆ ಕಟ್ಟೆಗಳು ಒಡೆದು ಹಾನಿ ಸಂಭವಿಸಿದೆ. ರಸ್ತೆ, ವಿದ್ಯುತ್ ಲೈನ್‌, ನೀರು ಸರಬರಾಜು ವ್ಯವಸ್ಥೆಗಳು ಹಾನಿಗೊಳಗಾಗಿದ್ದು, ಸಾರಿಗೆ, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಗ್ರಾಣ, ಶಾಲೆ, ಅಂಗನವಾಡಿ, ಸರ್ಕಾರಿ ಕಚೇರಿಗಳು ನೀರಿನಿಂದ ಹಾನಿಗೊಂಡು ಕಚೇರಿ ಕೆಲಸಗಳಿಗೂ ಅಡೆತಡೆಯಾಗುತ್ತಿದೆ ಎಂದು ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದ್ದಾರೆ.

ಈ ತುರ್ತು ಪರಿಸ್ಥಿತಿ ಮನಗಂಡು, ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಕೂಡಲೇ ಅತಿವೃಷ್ಟಿ ಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ಹಾನಿಗೊಳಗಾದ ಜನತೆಗೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ. ಇದೇ ವೇಳೆ ಕಂದಾಯ ಸಚಿವ ಕೃಷ್ಣಭೈರೇಗೌಡ, ಕೃಷಿ ಸಚಿವ ಚೆಲುವರಾಯಸ್ವಾಮಿ‌ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ.ಖಂಡ್ರೆ ಅವರಿಗೂ ಮನವಿ ಪತ್ರ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X