ಅಂಬೇಡ್ಕರ್ ಯುವ ಸೇನೆ ಬೀದರ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾಗಿ ದಿಲೀಪ್ ಹಸನ್ಮುಖಿ ನೇಮಕ

ಬೀದರ್: ಅಂಬೇಡ್ಕರ್ ಯುವ ಸೇನೆ ಸಂಘಟನೆಯ ಬೀದರ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾಗಿ ದಿಲೀಪ್ ಹಸನ್ಮುಖಿ ಅವರನ್ನು ನೇಮಕ ಮಾಡಲಾಗಿದೆ. ಸೆಪ್ಟೆಂಬರ್ 8ರಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಕ್ಷ ರಾಜಕುಮಾರ್ ಗೂನಳ್ಳಿ ಅವರ ಅಧ್ಯಕ್ಷತೆಯಲ್ಲಿ ನೇಮಕಾತಿ ಆದೇಶ ನೀಡಲಾಗಿದೆ.
ನೇಮಕಾತಿ ವೇಳೆ ಮಾತನಾಡಿದ ರಾಜಕುಮಾರ್ ಗೂನಳ್ಳಿ, ಬುದ್ಧ, ಬಸವ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶಾಹು ಮಹಾರಾಜರ ತತ್ವ-ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಜಿಲ್ಲೆಯ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ಕಾರ್ಮಿಕರಿಗೆ ಸರ್ಕಾರದ ವಿವಿಧ ಸೌಲಭ್ಯಗಳು ನಿಗದಿತ ಸಮಯದಲ್ಲಿ ದೊರೆಯುವಂತೆ ಕಾನೂನಾತ್ಮಕ ಹೋರಾಟ ನಡೆಸಿ, ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವಂತೆ ನೂತನ ಜಿಲ್ಲಾಧ್ಯಕ್ಷ ದಿಲೀಪ್ ಹಸನ್ಮುಖಿ ಅವರಿಗೆ ಅವರು ಕರೆ ನೀಡಿದರು.
Next Story




