ಡಿ.30ರಂದು ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ

ಬೀದರ್ : ಡಿ.30 ರಂದು ಬೀದರ್ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಪೂರ್ಣಕಾಲಿಕ, ಅರೆಕಾಲಿ ಅತಿಥಿ ಉಪನ್ಯಾಸಕರ ಸೇವೆಗೆ ನೇರ ಸಂದರ್ಶನ ನಡೆಸಲಾಗುತ್ತಿದೆ ಎಂದು ಬೀದರ್ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ನಾತಕೋತ್ತರ ವಿಷಯಗಳಾದ ಭೌತಶಾಸ್ತ್ರ, ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಗಣಕವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳಿಗೆ ಯು.ಜಿ. ಸಿ ನಿಯಮಾವಳಿ ಅನ್ವಯ ಪಿಎಚ್‌ಡಿ, ನೆಟ್, ಸೆಟ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಮಾತ್ರ ಪೂರ್ಣಕಾಲಿಕ, ಅರೆಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು 2025-26ನೇ ಶೈಕ್ಷಣಿಕ ಸಾಲಿಗೆ ಪಡೆಯಲು ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಮೂಲ ಅಗತ್ಯ ಶೈಕ್ಷಣಿಕ ದಾಖಲಾತಿ ಮತ್ತು ಸೇವಾ ದಾಖಲೆಗಳೊಂದಿಗೆ ಒಂದು ಪ್ರತಿ ಧೃಡೀಕೃತ ಪತ್ರ ಸಹಿತ ನೇರ ಸಂದರ್ಶನಕ್ಕೆ ಡಿ.30ರ ಬೆಳಿಗ್ಗೆ 11:30 ಗಂಟೆಗೆ ಹಾಲಹಳ್ಳಿ(ಕೆ) ಯ ಬೀದರ್ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಹಾಜರಾಗಬೇಕು ಎಂದು ಬೀದರ್ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರು ಮಾಹಿತಿ ನೀಡಿದ್ದಾರೆ.





