ಎಸೆಸೆಲ್ಸಿ ಪರೀಕ್ಷೆ-2ಕ್ಕೆ ವಿದ್ಯಾರ್ಥಿಗಳು ಹೆಸರು ನೊಂದಾಯಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಬೀದರ್ : 2025ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ನ್ನು ಬರೆಯುವುದಕ್ಕಾಗಿ ಹೆಸರು ನೊಂದಾಯಿಸಲು ಅವಕಾಶ ನೀಡಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳು ಹೆಸರು ನೊಂದಾಯಿಸಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪತ್ರಿಕಾ ಪ್ರಕಟಣೆ ಮೂಲಕ ಸೂಚನೆ ನೀಡಿದ್ದಾರೆ.
ಮೇ 26 ರಿಂದ ಜೂನ್ 2 ರವರೆಗೆ ಪರೀಕ್ಷೆ-2 ನಡೆಸಲಾಗುತ್ತಿದೆ. ಪರೀಕ್ಷೆ-1 ರಲ್ಲಿ ನೊಂದಾಯಿಸಿಕೊಂಡು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-2 ರಲ್ಲಿ ನೊಂದಾಯಿಸಲು ಯಾವುದೇ ಶುಲ್ಕ ಪಡೆಯುವುದಿಲ್ಲ. ಪರೀಕ್ಷೆ-1 ರಲ್ಲಿ ಅನುತ್ತಿರ್ಣರಾದ ಎಸೆಸೆಲ್ಸಿ ವಿದ್ಯಾರ್ಥಿಗಳು ಈ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
Next Story