Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌ ಜಿಲ್ಲೆಯ ಎಸ್‌ಐಆರ್‌ ಕರಡು...

ಬೀದರ್‌ ಜಿಲ್ಲೆಯ ಎಸ್‌ಐಆರ್‌ ಕರಡು ಮತದಾರರ ಪಟ್ಟಿ ಪ್ರಕಟ; 2.41 ಲಕ್ಷ ಮತದಾರರ ಸಂಖ್ಯೆ ಇಳಿಕೆ

ವಾರ್ತಾಭಾರತಿವಾರ್ತಾಭಾರತಿ24 Aug 2026 8:34 PM IST
share
ಬೀದರ್‌ ಜಿಲ್ಲೆಯ ಎಸ್‌ಐಆರ್‌ ಕರಡು ಮತದಾರರ ಪಟ್ಟಿ ಪ್ರಕಟ; 2.41 ಲಕ್ಷ ಮತದಾರರ ಸಂಖ್ಯೆ ಇಳಿಕೆ

ಬೀದರ್‌: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026ರ ಅಂಗವಾಗಿ ಬೀದರ್‌ ಜಿಲ್ಲೆಯಲ್ಲಿ ಆಗಸ್ಟ್‌ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರಡು ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್‌ 23ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳು, ತಹಸೀಲ್ದಾರ್‌ ಕಚೇರಿಗಳು, ಸಹಾಯಕ ಆಯುಕ್ತರ ಕಚೇರಿ, ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಸೇರಿದಂತೆ ನಿಗದಿತ ಸ್ಥಳಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅನುಮೋದಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೂ ಕರಡು ಪಟ್ಟಿಯ ಪ್ರತಿಯನ್ನು ನೀಡಲಾಗಿದೆ.

ಅರ್ಹ ಮತದಾರರು ತಮ್ಮ ಹೆಸರು ಹಾಗೂ ಇತರೆ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು. ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್‌ 23ರೊಳಗೆ ಸಂಬಂಧಪಟ್ಟ ತಹಸೀಲ್ದಾರ್‌ ಕಚೇರಿ ಅಥವಾ ಬೂತ್‌ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕವೂ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಲು ಅವಕಾಶವಿದೆ.

ಆಗಸ್ಟ್‌ 24ರಂದು ಪ್ರಕಟವಾದ ಕರಡು ಪಟ್ಟಿಯ ಪ್ರಕಾರ ಬಸವಕಲ್ಯಾಣದಲ್ಲಿ 2,23,745, ಹುಮನಾಬಾದ್‌ನಲ್ಲಿ 2,20,963, ಬೀದರ್‌ ದಕ್ಷಿಣದಲ್ಲಿ 1,81,708, ಬೀದರ್‌ ಕ್ಷೇತ್ರದಲ್ಲಿ 1,84,537, ಭಾಲ್ಕಿಯಲ್ಲಿ 2,11,947 ಹಾಗೂ ಔರಾದ್‌ನಲ್ಲಿ 1,98,016 ಮತದಾರರಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 6,32,572 ಪುರುಷರು, 5,88,310 ಮಹಿಳೆಯರು ಹಾಗೂ 34 ತೃತೀಯ ಲಿಂಗದ ಮತದಾರರು ಸೇರಿದಂತೆ 12,20,916 ಮತದಾರರು ಕರಡು ಪಟ್ಟಿಯಲ್ಲಿ ಇದ್ದಾರೆ.

2.41 ಲಕ್ಷ ಮತದಾರರ ಸಂಖ್ಯೆ ಇಳಿಕೆ :

ಎಸ್‌ಐಆರ್‌ ಪ್ರಕ್ರಿಯೆಗೂ ಮುನ್ನ ಜಿಲ್ಲೆಯಲ್ಲಿ 14,61,959 ಮತದಾರರಿದ್ದರು. ಇದೀಗ ಕರಡು ಪಟ್ಟಿಯಲ್ಲಿ 12,20,916 ಮತದಾರರು ದಾಖಲಾಗಿರುವುದರಿಂದ 2,41,043 ಮತದಾರರ ಸಂಖ್ಯೆ ಇಳಿಕೆಯಾಗಿದೆ. ಈ ಇಳಿಕೆ ಗೈರು, ಸ್ಥಳಾಂತರ, ಮೃತರು, ನಕಲಿ ಅಥವಾ ಈಗಾಗಲೇ ನೋಂದಣಿಯಾಗಿರುವ ಹೆಸರುಗಳ ಪರಿಶೀಲನೆ ಸೇರಿದಂತೆ ಎಸ್‌ಐಆರ್‌ ಪ್ರಕ್ರಿಯೆಯ ಪರಿಣಾಮವಾಗಿದೆ.

ಆದಾಗ್ಯೂ, ಕರಡು ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅರ್ಹ ಮತದಾರರು ಆತಂಕಪಡಬೇಕಿಲ್ಲ. ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ತಮ್ಮ ಹೆಸರು ಮರುಸೇರ್ಪಡೆಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X