Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ:...

ಔರಾದ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ: ಶಾಶ್ವತ ಪರಿಹಾರಕ್ಕೆ ಡಾ.ಭೀಮಸೇನರಾವ್ ಶಿಂಧೆ ಆಗ್ರಹ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ18 Nov 2026 7:58 PM IST
share
ಔರಾದ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ: ಶಾಶ್ವತ ಪರಿಹಾರಕ್ಕೆ ಡಾ.ಭೀಮಸೇನರಾವ್ ಶಿಂಧೆ ಆಗ್ರಹ

ಔರಾದ್: ಪಟ್ಟಣದ 20 ವಾರ್ಡ್‌ಗಳಲ್ಲಿ ಕುಡಿಯುವ ನೀರಿಗಾಗಿ ಜನರು ಸಂಕಷ್ಟ ಎದುರಿಸುತ್ತಿದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿನ ಸಮಸ್ಯೆ ಉಲ್ಬಣಿಸಿದೆ. ನೀರು ಪೂರೈಕೆಗೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ್ ಶಿಂಧೆ ಆಗ್ರಹಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಸಲ್ಲಿಸಿರುವ ಅವರು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಕೆಲ ದಿನಗಳ ಹಿಂದೆ ಔರಾದ್ ಪಟ್ಟಣ ಹಾಗೂ ತೆಗಂಪೂರ್ ನೀರಿನ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪೈಪ್‌ಲೈನ್ ದುರಸ್ತಿ ಹಾಗೂ ನೀರು ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೂ ಜನರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಸಚಿವರ ಸೂಚನೆ ಮತ್ತು ಪರಿಶೀಲನೆಯ ನಂತರವೂ ಸಮಸ್ಯೆ ಮುಂದುವರಿದಿರುವುದು ಆಡಳಿತಾತ್ಮಕ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.

ಜನರಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ತುರ್ತು ಕಾಮಗಾರಿ ಪೂರ್ಣಗೊಂಡಿದ್ದರೂ ಅಗತ್ಯ ಮೋಟಾರ್ ಅಳವಡಿಸದಿರುವುದು ವಿಷಾದನೀಯ. ಜಿಲ್ಲಾಡಳಿತ ಕೇವಲ ತಾತ್ಕಾಲಿಕ ಕ್ರಮಗಳಿಗೆ ಸೀಮಿತವಾಗದೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಜನರಿಗೆ ಕುಡಿಯುವ ನೀರು ಪೂರೈಸುವುದು ಸರ್ಕಾರದ ಕರ್ತವ್ಯವಾಗಿದೆ. ಔರಾದ್ ಪಟ್ಟಣಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸುವುದು ಶಾಶ್ವತ ಪರಿಹಾರವಲ್ಲ. ಪಟ್ಟಣದ ನೀರು ಸರಬರಾಜು ಘಟಕಕ್ಕೆ 50 ಎಚ್.ಪಿ. ಸಾಮರ್ಥ್ಯದ ಮೋಟಾರ್ ಇಲ್ಲದಿರುವುದರಿಂದ ನೀರಿನ ಸಮಸ್ಯೆ ಎದುರಾಗಿದೆ. ಪ್ರತಿವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರಂಜಾ ಜಲಾಶಯದಿಂದ ನೀರು ಸರಬರಾಜು ಮಾಡುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜಿಲ್ಲಾಡಳಿತ ಮುತುವರ್ಜಿ ವಹಿಸಿ ಪಟ್ಟಣದ ಜನರ ನೀರಿನ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಡಾ. ಭೀಮಸೇನರಾವ್ ಶಿಂಧೆ ಒತ್ತಾಯಿಸಿದ್ದಾರೆ.

Tags

Drinking waterAuradBidar
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X