Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಶೈಕ್ಷಣಿಕ...

ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು : ಯು.ನಿಸಾರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ4 Nov 2025 6:11 PM IST
share
ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು : ಯು.ನಿಸಾರ್ ಅಹ್ಮದ್

ಬೀದರ್ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಒತ್ತು ಕಾಳಜಿ ನೀಡುವಂತೆ ಅಲ್ಪಸಂಖ್ಯಾತರ ಅಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್‌ ಅವರು ಸೂಚಿಸಿದರು.

ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ವಿವಿಧ ಸಮುದಾಯಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಸ್ಲಿಂ ಹಾಗೂ ಸಿಖ್ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮುಸ್ಲಿಂ ಸಮುದಾಯದ ಮಕ್ಕಳು ಶಾಲೆಯಿಂದ ಹೆಚ್ಚು ಹೊರಗುಳಿದವರಾಗಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ನೀಡುವಂತೆ ತಿಳಿಸಿದರು.

2011ರ ಜನಗಣತಿ ಪ್ರಕಾರ ಶೇ.43 ರಷ್ಟು ಮುಸ್ಲಿಂ ಜನಸಂಖ್ಯೆ ಅಶಿಕ್ಷಿತರಾಗಿದ್ದು, ಶೇ.15 ರಷ್ಟು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಸಮೀಕ್ಷೆ ಪ್ರಕಾರ ಶೇ.6 ರಷ್ಟು ಮಕ್ಕಳು 10ನೇ ತರಗತಿಗೆ ದಾಖಲಾಗಿದ್ದಾರೆ. ಡಿಡಿಪಿಐ, ಮಹಿಳಾ ಮಕ್ಕಳ ಅಧಿಕಾರಿಗಳು, ಸಮಗ್ರ ಶಿಕ್ಷಣ ಯೋಜನೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸೂಚನೆ ನೀಡಿದರು.

ಅಂಗನವಾಡಿಯಿಂದ ಪ್ರಾಥಮಿಕ ಶಾಲೆಗೆ ಮಕ್ಕಳು ಕಡ್ಡಾಯವಾಗಿ ದಾಖಲಾಗುವಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಜಿಲ್ಲೆಯಲ್ಲಿ ಈ ಬಗ್ಗೆ ಸಮೀಕ್ಷೆ ನಡೆಸಿ ಒಂದು ತಿಂಗಳಲ್ಲಿ ಆಯೋಗಕ್ಕೆ ವರದಿ ಸಲ್ಲಿಸುವಂತೆ ಮಹಿಳಾ ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.

ಬೀದರ್ ಜಿಲ್ಲೆಯ ಬಿದರಿ ಕಲೆ, ಗೋಮಿತ್ರಿ ಸೀರೆ ನೇಕಾರರು ಹಾಗೂ ಸಿಕ್ಕಲಗಾರರ ಸಮುದಾಯದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳು ಶೀಘ್ರವೇ ಯೋಜನಾ ವರದಿಯೊಂದು ರೂಪಿಸಿ ಆಯೋಗಕ್ಕೆ ಕಳುಹಿಸುವಂತೆ ಅವರು ತಿಳಿಸಿದರು.

ಬಿದರಿ ಕಲೆಯನ್ನು ಹೆಚ್ಚೆಚ್ಚು ಪ್ರೋತ್ಸಾಹಿಸಲು ಸಾಕಷ್ಟು ಅವಕಾಶವಿದ್ದು, ಈ ನಿಟ್ಟಿನಲ್ಲಿ 6 ತಿಂಗಳ ವಿಶೇಷ ಕೋರ್ಸ್ ಒದಗಿಸುವ ಯೋಜನೆಯನ್ನು ಆಯೋಗದಿಂದ ಆರಂಭಿಸುವ ಬಗ್ಗೆ ಚಿಂತಿಸಲಾಗುವುದು. ಬಸವಕಲ್ಯಾಣದಲ್ಲಿ ಗೋಮಿತ್ರಿ ಸೀರೆಗಳನ್ನು (ಜರದೋಜಿ) ನೇಯುವ ಅಲ್ಪಸಂಖ್ಯಾತರ ನೇಕಾರರ ಸಮುದಾಯವಿದ್ದು, ಅವರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿಗೆ ತಿಳಿಸಿದರು.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ, ಕಾರ್ಪೋರೇಶನ್ ಕೌಶಲ್ಯ ಅಭಿವೃದ್ಧಿ ಅಧಿಕಾರಿ, ಜವಳಿ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗಳು ಒಟ್ಟಾಗಿ ಸೇರಿ ಬಿದರಿ, ಗೋಮಿತ್ರಿ ಹಾಗೂ ಸಿಕ್ಕೆಲಗಾರ ಕ್ಲಸ್ಟರ್ ನಿರ್ಮಿಸಲು ಯೋಜನೆ ನಿರ್ಮಿಸಿದಲ್ಲಿ ಮುಂಬರುವ ಬಜೆಟ್‌ ನಲ್ಲಿ ವಿಶೇಷ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಆಯೋಗದ ವಿವಿಧ ಸದಸ್ಯರು ಹಾಗೂ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X