Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಎಲ್ಲರೂ ರಸ್ತೆ ಸಂಚಾರ ನಿಯಮ ಪಾಲನೆ...

ಎಲ್ಲರೂ ರಸ್ತೆ ಸಂಚಾರ ನಿಯಮ ಪಾಲನೆ ಮಾಡಬೇಕು : ನ್ಯಾ. ರಾಘವೇಂದ್ರ ಉಪಾಧ್ಯೆ

ವಾರ್ತಾಭಾರತಿವಾರ್ತಾಭಾರತಿ30 Jun 2026 7:15 PM IST
share
ಎಲ್ಲರೂ ರಸ್ತೆ ಸಂಚಾರ ನಿಯಮ ಪಾಲನೆ ಮಾಡಬೇಕು : ನ್ಯಾ. ರಾಘವೇಂದ್ರ ಉಪಾಧ್ಯೆ

ಬೀದರ್‌ : ಪ್ರತಿಯೊಬ್ಬರೂ ರಸ್ತೆ ಮೇಲೆ ಹೋಗುವುದು ಅನಿವಾರ್ಯವಿದೆ. ಆದರೆ, ನಿಯಮದೊಂದಿಗೆ ರಸ್ತೆ ಮೇಲೆ ಹೋದಾಗ ನಮ್ಮ ಜೀವಕ್ಕೂ ಮತ್ತು ಮತ್ತೊಬ್ಬರ ಜೀವಕ್ಕೂ ಒಳ್ಳೆಯದಾಗುತ್ತದೆ. ಹೀಗಾಗಿ ರಸ್ತೆ ಸಂಚಾರ ನಿಯಮ ಪಾಲನೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯೆ ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆಯ ವತಿಯಿಂದ ನಗರದ ಪ್ರತಾನ ನಗರದಲ್ಲಿರುವ ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಯಲ್ಲಿ ಮಂಗಳವಾರ ನಡೆದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾರಿಗೆ ಇಲಾಖೆಯಲ್ಲಿ 1991ರ ಏ.1 ರಿಂದ 2022ರ ಮಾ.31ರ ವರೆಗಿನ ಅವಧಿಯಲ್ಲಿ ದಾಖಲಾದ ಇಲಾಖಾ ಪ್ರಕರಣಗಳ ದಂಡದ ಮೊತ್ತದ ಮೇಲೆ ಶೇ. 50ರಷ್ಟು ವಿನಾಯಿತಿ ನೀಡಲಾಗಿದೆ. ಈ ವರ್ಷದ ಜೂ.21 ರಿಂದ ಜು.10ನೇ ತಾರಿಕಿನ ಅವಧಿಯಲ್ಲಿ ಭರಿಸಿದರೆ ಮಾತ್ರ ಶೇ.50ರಷ್ಟು ದಂಡ ಭರಿಸಬಹುದಾಗಿದೆ. ಅನಂತರದಲ್ಲಿ ಭರಿಸುವುದಾದರೆ ಶೇ.100 ರಷ್ಟು ದಂಡ ಭರಿಸಬೇಕಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಈ ವಿನಾಯಿತಿ ನೀಡುವುದರಿಂದ ಸರಕಾರಕ್ಕೆ ನಷ್ಟವೇ ಇದೆ. ಆದರೆ, ಹಲವು ವರ್ಷಗಳಿಂದ ಭರಿಸದೇ ಉಳಿಸಿಕೊಂಡಿರುವ ಹಲವು ಪ್ರಕರಣಗಳಲ್ಲಿನ ದಂಡದ ಮೊತ್ತ ಸಾರ್ವಜನಿಕರಿಗೆ ಭಾರವಾಗದಿರಲಿ ಎಂದು ಸರಕಾರ ಈ ವಿನಾಯಿತಿ ನೀಡಿದೆ. ಸಾರ್ವಜನಿಕರು ಈ ವಿನಾಯಿತಿಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಈ ಕುರಿತು ಅರಿವು ಮೂಡಿಸಿದ್ದರೂ ಕೂಡ ಜನರಿಂದ ಸ್ಪಂದನೆ ಸಿಗುತ್ತಿಲ್ಲ. ಹೀಗಾಗಿ ಇನ್ನಾದರೂ ಸಾರ್ವಜನಿಕರು ಗಮನ ಹರಿಸಬೇಕು ಎಂದು ಹೇಳಿದರು.

ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುಹಮ್ಮದ್ ಜಾಫರ್ ಸಾದಿಕ್‌ ಅವರು ಮಾತನಾಡಿ, ತೆರಿಗೆ ಮೇಲೆ ವಿನಾಯಿತಿ ಇಲ್ಲ. ದಂಡದ ಮೇಲೆ ವಿನಾಯಿತಿ ಇದೆ. ಸಾರ್ವಜನಿಕರು ಈ ಕುರಿತು ತಿಳಿದುಕೊಂಡು ಬಾಕಿ ಉಳಿದಿರುವ ದಂಡವನ್ನು ಭರಿಸಬೇಕು. ರಾಜ್ಯ ಸರಕಾರದಿಂದ ಶೇ.50ರಷ್ಟು ವಿನಾಯಿತಿ ನೀಡಲಾಗಿದೆ. ಇದರ ಉಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೋಟಾರು ವಾಹನ ನಿರೀಕ್ಷಕ ಪ್ರಕಾಶ್ ಎಚ್. ಉಳ್ಳೆ, ರವಿಶಂಕರ್ ನಾಗಠಾಣಾ, ಮಹೇಶಕುಮಾರ್ ಮೆಣಸಿನಕಾಯಿ, ಕಚೇರಿ ಅದಿಕ್ಷಕ ಮಲ್ಲಿಕಾರ್ಜುನ್ ಎಂ.‌, ಪ್ರೇಮಕುಮಾರ್ ಎಲಗುರ್ತಿ, ಗುರುಪ್ರಸಾದ್ ಗುಳೇದಗುಡ್ಡ, ಸುನಿಲ್ ಬಗಲಿ, ಸೈಯದ್ ಕಲಿಮ್, ಅಂಬಿಕಾ. ಭಾಗ್ಯವಂತಿ ಉಪಸ್ಥಿತರಿದ್ದರು.

Tags

traffic rulesJustice Raghavendra Upadhyay
share
ವಾರ್ತಾಭಾರತಿ
ವಾರ್ತಾಭಾರತಿ
Next Story
X