Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಲಸೂರು ತಾಲೂಕನ್ನು ಬರಪೀಡಿತವೆಂದು...

ಹುಲಸೂರು ತಾಲೂಕನ್ನು ಬರಪೀಡಿತವೆಂದು ಘೋಷಿಸಲು ರೈತರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Aug 2026 7:55 PM IST
share
ಹುಲಸೂರು ತಾಲೂಕನ್ನು ಬರಪೀಡಿತವೆಂದು ಘೋಷಿಸಲು ರೈತರ ಆಗ್ರಹ

ಹುಲಸೂರು: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹುಲಸೂರು ತಾಲೂಕನ್ನು ಕೈಬಿಟ್ಟಿರುವುದನ್ನು ಖಂಡಿಸಿ, ಕೂಡಲೇ ತಾಲೂಕನ್ನು ಬರಪೀಡಿತವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಗಡಿಗೌಡಗಾಂವ್ ಶಾಖೆಯ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಹಾಗೂ ಸಂಭಾಜಿ ಬ್ರಿಗೇಡ್ ಬೆಂಬಲದೊಂದಿಗೆ ನಡೆದ ಪ್ರತಿಭಟನೆಯಲ್ಲಿ ರೈತರು ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೆ ಬೃಹತ್ ಪಾದಯಾತ್ರೆ ನಡೆಸಿದರು. ಬಳಿಕ ತಹಶೀಲ್ದಾರ್ ಶಿವಾನಂದ ಮೇತ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಕಳುಹಿಸುವಂತೆ ಮನವಿ ಮಾಡಿದರು.

ಹುಲಸೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದು ರಾಜ್ಯ ಸರ್ಕಾರ ರೈತರಿಗೆ ಮಾಡಿರುವ ಅನ್ಯಾಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕೇವಲ 244 ಮಿ.ಮೀ. ಮಳೆಯಾಗಿದ್ದು, ವಾಡಿಕೆಯ 398 ಮಿ.ಮೀ.ಗೆ ಹೋಲಿಸಿದರೆ ಶೇ.39ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ತಿಳಿಸಿದರು.

ಜೂನ್‌ನಲ್ಲಿ ಮಳೆ ಬಾರದ ಪರಿಣಾಮ ಬಿತ್ತನೆ ವಿಳಂಬವಾಗಿದ್ದು, ತೇವಾಂಶದ ಕೊರತೆಯಿಂದ ಬಿತ್ತನೆ ಮಾಡಿದ ಬೆಳೆಗಳೂ ಒಣಗಿವೆ. ಮಳೆಯ ಅಭಾವದಿಂದ ಬಿತ್ತನೆ ಪ್ರಮಾಣ ಕಡಿಮೆಯಾಗಿದ್ದು, ಈಗಾಗಲೇ ಸಾಲದ ಹೊರೆ ಹೊತ್ತಿರುವ ರೈತರು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರೈತರು ಹೇಳಿದರು.

ತಾಲೂಕಿನ ಬರ ಪರಿಸ್ಥಿತಿಯನ್ನು ಸರ್ಕಾರ ಕೂಡಲೇ ಪುನರ್ ಪರಿಶೀಲಿಸಿ ಹುಲಸೂರನ್ನು ಬರಪೀಡಿತ ತಾಲೂಕು ಎಂದು ಘೋಷಿಸಬೇಕು. ಪ್ರತಿ ಹೆಕ್ಟೇರ್‌ಗೆ 50 ಸಾವಿರ ರೂ. ಬೆಳೆ ಪರಿಹಾರ ನೀಡುವುದರ ಜೊತೆಗೆ ರೈತರ ಬ್ಯಾಂಕ್ ಸಾಲ ಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘ ತಾಲೂಕು ಕಾರ್ಯದರ್ಶಿ ಅನೀಲಕುಮಾರ್ ತಾಂಬಳೆ, ಸಂಬಾಜಿ ಬ್ರಿಗೇಡ್ ತಾಲೂಕಾಧ್ಯಕ್ಷ ಜ್ಞಾನೋಬಾ ನಿಟ್ಟೂರೆ, ಭಾರತೀಯ ಕಿಸಾನ್ ಸಂಘದ ಬಸವಕಲ್ಯಾಣ ತಾಲೂಕಾಧ್ಯಕ್ಷ ಶರಣಪ್ಪ ಧನ್ನೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲೂಕಾಧ್ಯಕ್ಷ ಕೇದಾರ್ ಭೋಪಳೆ, ರಫೀಕ್ ಮೇಹಕರವಾಲೆ, ರವಿ ತೋಗರಖೇಡೆ,‌ ಸಾಧೀಕ್ ಸೌದಾಗರ್,‌ ಜೈರಾಜ್ ಬಿರಾದಾರ್, ಶಿವಾ ತಾಟೆ,‌ ಹಾವಪ್ಪ ಕಾಮಶೇಟೆ, ಪ್ರಕಾಶ್ ಮೆಂಡೊಳೆ, ಅಶೋಕ್ ಖ್ಯಾಡೆ, ಬಸಪ್ಪ ಚೌರೆ, ಬಂಡೆಪ್ಪ ಪಾಟೀಲ್, ಕಾಶಿನಾಥ್ ರಾಚೋಟೆ, ದೇವಾನಂದ್ ಕುರದೆ, ಸಂಗಪ್ಪ ತಾಂಬಳೆ, ಬಾಬುರಾವ್ ಗುಂಜಟೆ, ದತ್ತು ರಾಘೋ, ಧನಾಜಿ ಸಮದರೆ, ಅರವಿಂದ್ ಪಾಟೀಲ್,‌ ದೇವಿಂದ್ರ ಹಲಂಗೆ, ಸಂತೋಷ್ ಬಿರಾದಾರ್, ಯುವರಾಜ್ ಜಾಮಖಂಡೆ, ನಾಗನಾಥ್ ಬನಸೂಡೆ,‌ ರಾಮ್ ಬಿರಾದಾರ್,‌ ಗೊವಿಂದ್ ಮೇತ್ರೆ, ಶಿವಕುಮಾರ್ ಪಾಟೀಲ್ ಹಾಗೂ ಸತೀಶ್ ಸ್ವಾಮಿ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದ ರೈತರು ಭಾಗವಹಿಸಿದ್ದರು.

Tags

drought-hitHulasur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X