Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಕಬ್ಬಿಗೆ 4 ಸಾವಿರ ರೂ. ಬೆಲೆ ನಿಗದಿಗೆ...

ಕಬ್ಬಿಗೆ 4 ಸಾವಿರ ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೀದರ್‌ನಲ್ಲಿ ರೈತರ ಪ್ರತಿಭಟನೆ

ಮಂಗಲಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ; ಜಿಲ್ಲೆಯ ವಿವಿಧೆಡೆ ರಸ್ತೆ ತಡೆದು ಆಕ್ರೋಶ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ19 Nov 2026 8:05 PM IST
share
ಕಬ್ಬಿಗೆ 4 ಸಾವಿರ ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೀದರ್‌ನಲ್ಲಿ ರೈತರ ಪ್ರತಿಭಟನೆ

ಬೀದರ್: ಕಬ್ಬಿಗೆ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಯಿತು. ಮಂಗಲಗಿ ಗ್ರಾಮದ ಸಮೀಪದ ಹೈದರಾಬಾದ್–ಮುಂಬೈ ರಾಷ್ಟ್ರೀಯ ಹೆದ್ದಾರಿಯ ಟೋಲ್ ಗೇಟ್ ಬಳಿ ರಸ್ತೆ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘಟನೆಗಳು ಗುರುವಾರ ಬೀದರ್ ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಬೆಳಿಗ್ಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ರೈತರು, ಅಲ್ಲಿಂದ ಕೇಂದ್ರ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸಿದರು. ಈ ವೇಳೆ ಕೆಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ, ಕೇಂದ್ರ ಬಸ್ ನಿಲ್ದಾಣಕ್ಕೆ ತೆರಳಿ ಘೋಷಣೆಗಳನ್ನು ಕೂಗಿದರು. ಬಳಿಕ ರೈತರೆಲ್ಲರೂ ಮಂಗಲಗಿ ಗ್ರಾಮದ ಸಮೀಪದ ಟೋಲ್ ಗೇಟ್‌ಗೆ ತೆರಳಿ ಪ್ರತಿಭಟನೆ ನಡೆಸಿದರು. ಬಂದ್‌ಗೆ ಕರೆ ನೀಡಿದ್ದರೂ ನಗರ ಸಂಪೂರ್ಣವಾಗಿ ಬಂದ್ ಆಗಿರಲಿಲ್ಲ. ಎಂದಿನಂತೆ ವ್ಯಾಪಾರ ವಹಿವಾಟು ಹಾಗೂ ಇತರ ಚಟುವಟಿಕೆಗಳು ನಡೆದವು.

ಮಂಗಲಗಿ ಗ್ರಾಮದ ಸಮೀಪ ಹೈದರಾಬಾದ್–ಮುಂಬೈ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದರಿಂದ ನೂರಾರು ಲಾರಿಗಳು ರಸ್ತೆಯಲ್ಲೇ ನಿಲ್ಲುವಂತಾಯಿತು. ಮಂಗಲಗಿ ಟೋಲ್ ಗೇಟ್‌ನಿಂದ ಚಿಟಗುಪ್ಪ ಕ್ರಾಸ್ ಹಾಗೂ ಮನ್ನಾಎಖ್ಖೇಳ್ಳಿ ವರೆಗೆ ಲಾರಿಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಸಾವಿರಾರು ಪ್ರಯಾಣಿಕರು ಪರದಾಡುವಂತಾಯಿತು. ಬಳಿಕ ಪೊಲೀಸರು ಚಾಂಗ್ಲೇರಾ ಗ್ರಾಮದ ಮಾರ್ಗವಾಗಿ ಪ್ರಯಾಣಿಸಲು ವಾಹನ ಸವಾರರಿಗೆ ಅನುಕೂಲ ಮಾಡಿಕೊಟ್ಟರು.

ಜಿಲ್ಲೆಯ ಹಲವು ಪಟ್ಟಣಗಳು, ಹೋಬಳಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿಯೂ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ತಡೆಯುವ ಉದ್ದೇಶದಿಂದ ಪೊಲೀಸರು ನೂರಾರು ರೈತರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು. ಆದರೂ ಜಿಲ್ಲೆಯ ವಿವಿಧೆಡೆ ರಸ್ತೆ ತಡೆ ನಡೆಸುವ ಮೂಲಕ ರೈತರು ತಮ್ಮ ಪ್ರತಿಭಟನೆ ಮುಂದುವರಿಸಿದರು.

ಪ್ರತಿ ಟನ್ ಕಬ್ಬಿಗೆ 4 ಸಾವಿರ ರೂ. ಬೆಲೆ ನಿಗದಿಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಬಂದು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದು ಕುಳಿತರು. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಅಂತಾರಾಜ್ಯ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.

ಉಚ್ಚಾ ಗ್ರಾಮದಲ್ಲಿ ರಸ್ತೆ ತಡೆ :

ಭಾಲ್ಕಿ ತಾಲೂಕಿನ ಉಚ್ಚಾ ಗ್ರಾಮದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಸ್ತೆ ಬದಿಯಲ್ಲೇ ಅಡುಗೆ ತಯಾರಿಸಿ, ರಸ್ತೆಯ ಮೇಲೆಯೇ ಸಾಲಾಗಿ ಕುಳಿತು ಊಟ ಮಾಡಿದರು. ಇದರಿಂದ ಕೆಲಕಾಲ ಬಸವಕಲ್ಯಾಣ–ಭಾಲ್ಕಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಅಂಬೇಸಾಂಗವಿ ಮೇಲ್ಸೇತುವೆ ಬಳಿ ಭಾಲ್ಕಿ–ಬೀದರ್ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು. ಹಲಬರ್ಗಾ, ದಾಡಗಿ ಕ್ರಾಸ್ ಹಾಗೂ ಭಾತಂಬ್ರಾ ಗ್ರಾಮಗಳಲ್ಲಿಯೂ ರೈತರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ದಾಡಗಿ ಕ್ರಾಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನೂ ಪೊಲೀಸರು ಬಂಧಿಸಿದರು.

ದುಬಲಗುಂಡಿ, ರಾಜೇಶ್ವರದಲ್ಲೂ ಪ್ರತಿಭಟನೆ:

ಹುಮನಾಬಾದ್ ತಾಲೂಕಿನ ದುಬಲಗುಂಡಿ ಕ್ರಾಸ್ ಬಳಿ ಹುಮನಾಬಾದ್–ಬೀದರ್ ಪ್ರಮುಖ ರಸ್ತೆಯನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದರು. ರಾಜೇಶ್ವರ ಗ್ರಾಮದಲ್ಲಿಯೂ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು.

ಹುಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿಯೂ ಸ್ಥಳೀಯ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕೊನೆಯಲ್ಲಿ ಮಂಗಲಗಿ ಟೋಲ್ ಗೇಟ್ ಬಳಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು. ಆದರೆ, ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಆಗಮಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.

ರೈತರ ಪ್ರತಿಭಟನೆಗೆ ಹಲವು ಮಠಾಧೀಶರು ಹಾಗೂ ವಕೀಲರ ಸಂಘ ಬೆಂಬಲ ಸೂಚಿಸಿತ್ತು. ಜಿಲ್ಲಾದ್ಯಂತ ವಿವಿಧೆಡೆ ನಡೆದ ಪ್ರತಿಭಟನೆಗಳಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು.

Tags

FarmersprotestBidarsugarcane
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X