BIDAR | ಕಾರು-ಬೈಕ್ ಮಧ್ಯೆ ಅಪಘಾತ : ಬೈಕ್ ಸವಾರ ಮೃತ್ಯು

ಬೀದರ್ : ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂದಬಂದಗಿ ಗ್ರಾಮದ ಬಳಿ ಬುಧವಾರ ರಾತ್ರಿ ಸುಮಾರು 11:30ರ ವೇಳೆ ಸಂಭವಿಸಿದೆ.
ಮೃತ ಯುವಕನನ್ನು ಭಾಲ್ಕಿ ತಾಲೂಕಿನ ಕಣಜಿ ಗ್ರಾಮದ ನಿವಾಸಿ ನಾಗೇಶ್ (25) ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ ಸಿಂದಬಂದಗಿ ಗ್ರಾಮದ ಬಳಿ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ನಾಗೇಶ್ ರನ್ನು. ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಬೈಕ್ ಸಹಸಹವಾರನಿಗೆ ಗಾಯಗಳಾಗಿದ್ದು, ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಕಾರು ಮತ್ತು ಬೈಕ್ ಜಖಂಗೊಂಡಿವೆ.
Next Story







