Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್‌ನಲ್ಲಿ 31.05 ಕೋಟಿ ರೂ....

ಹುಮನಾಬಾದ್‌ನಲ್ಲಿ 31.05 ಕೋಟಿ ರೂ. ವೆಚ್ಚದ ಒಳಚರಂಡಿ ಕಾಮಗಾರಿಗೆ ಶಂಕುಸ್ಥಾಪನೆ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ25 Nov 2026 6:22 PM IST
share
ಹುಮನಾಬಾದ್‌ನಲ್ಲಿ 31.05 ಕೋಟಿ ರೂ. ವೆಚ್ಚದ ಒಳಚರಂಡಿ ಕಾಮಗಾರಿಗೆ ಶಂಕುಸ್ಥಾಪನೆ

ಹುಮನಾಬಾದ್: ಪಟ್ಟಣಕ್ಕೆ ಜಲಸುದ್ಧಿ ಯೋಜನೆ ಹಾಗೂ ಸ್ವಚ್ಛ ಭಾರತ ಮಿಷನ್ 2.0ರಡಿ 31.05 ಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆಯ ನಿರ್ಮಾಣ ಮತ್ತು ಉನ್ನತೀಕರಣ ಕಾಮಗಾರಿಗೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದರು.

ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ, ಜಲಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಹಾಗೂ ಹುಮನಾಬಾದ್ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಘನತ್ಯಾಜ್ಯ ನಿರ್ವಹಣೆಗಾಗಿ ಈ ಹಿಂದೆ 30 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಇದೀಗ ಮತ್ತೆ 31 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ನಿಗದಿತ ಸಮಯದೊಳಗೆ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.

ಕಳಪೆ ಕಾಮಗಾರಿಗಳ ಕುರಿತು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕ್ರಮದಲ್ಲೇ ಸಹಾಯಕ ಆಯುಕ್ತರಿಗೆ ಸೂಚನೆ ನೀಡಿದರು.

ಜೆಜೆಎಂ ಕಾಮಗಾರಿಗಳಿಗಾಗಿ ರಸ್ತೆಗಳನ್ನು ಅಗೆದರೆ, ಕಾಮಗಾರಿ ಪೂರ್ಣಗೊಂಡ ಬಳಿಕ ಅವುಗಳನ್ನು ಸರಿಪಡಿಸುವುದು ಸಂಬಂಧಪಟ್ಟವರ ಜವಾಬ್ದಾರಿಯಾಗಿದೆ. ವಿಬಿ-ಜಿ ರಾಮ್‌ ಜಿ ಯೋಜನೆಯಡಿ ಬಸ್ ಶೆಲ್ಟರ್‌ಗಳನ್ನು ನಿರ್ಮಿಸುವ ಕಾರ್ಯ ಕೈಗೊಳ್ಳಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಗ್ರಾಮೀಣ ಭಾಗಕ್ಕೆ ಅನುದಾನವೇ ಬಂದಿರಲಿಲ್ಲ. ಆದರೆ, ನಮ್ಮ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ಹೇಳಿದರು.

ಶಾಸಕ ಸಿದ್ದು ಪಾಟೀಲ್ ಮಾತನಾಡಿ, ಪಟ್ಟಣದ ಸ್ವಚ್ಛತೆಗೆ ಯುಜಿಡಿ ಯೋಜನೆ ಅತ್ಯಂತ ಮುಖ್ಯವಾಗಿದೆ. ಸ್ವಚ್ಛತೆ ಇದ್ದಾಗ ಮಾತ್ರ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಈ ಹಿಂದೆ 38 ಕೋಟಿ ರೂ. ಅನುದಾನದಲ್ಲಿ ಕೈಗೊಂಡ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಪೈಪ್‌ಗಳನ್ನು ಕಳವು ಮಾಡಲಾಗಿದೆ. ಕಾಮಗಾರಿಯನ್ನು ಹಸ್ತಾಂತರಿಸಿರುವ ದಾಖಲೆಗಳಿರುವ ಕಡತವೂ ಪುರಸಭೆಯಲ್ಲಿ ಲಭ್ಯವಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಅವರ ಎದುರೇ ದೂರಿದರು.

ಸಿಂಧನಕೇರಾ ಗ್ರಾಮದಲ್ಲಿರುವ ಕಸ ವಿಲೇವಾರಿ ಘಟಕದ ಕುರಿತು ಪ್ರಸ್ತಾಪಿಸಿದ ಅವರು, ಘಟಕಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿಯೂ ಇಲ್ಲ. ಸಿಂಧನಕೇರಾ ಗ್ರಾಮಸ್ಥರು ಕಸ ಸಾಗಿಸಲು ಅವಕಾಶ ನೀಡುತ್ತಿಲ್ಲ. ಹೀಗಾಗಿ ಎರಡು-ಮೂರು ದಿನಗಳ ಕಾಲ ಹುಮನಾಬಾದ್ ಪಟ್ಟಣದಲ್ಲೇ ಕಸ ಸಂಗ್ರಹವಾಗಿರುತ್ತದೆ. ತಾತ್ಕಾಲಿಕವಾಗಿ ಮನವಿ ಮಾಡಿ ಚಿಟಗುಪ್ಪಾ ಪಟ್ಟಣಕ್ಕೆ ಕಸ ಸಾಗಿಸಲು ವ್ಯವಸ್ಥೆ ಮಾಡಿದ್ದೇನೆ. ಆದರೆ, ಮುಂದಿನ ದಿನಗಳಲ್ಲಿ ಅಲ್ಲಿಯೂ ಅವಕಾಶ ಸಿಗುವುದಿಲ್ಲ. ಆದ್ದರಿಂದ ತಕ್ಷಣವೇ ಕಸ ವಿಲೇವಾರಿ ಘಟಕಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್ ಪಾಟೀಲ್ ಮಾತನಾಡಿ, ಹುಮನಾಬಾದ್ ಕ್ಷೇತ್ರದಲ್ಲಿ ಸುಮಾರು 80 ಕಾಮಗಾರಿಗಳು ಪೂರ್ಣಗೊಳ್ಳದೆ ಸ್ಥಗಿತಗೊಂಡಿವೆ ಎಂದು ದೂರಿದರು. ಮತ್ತೊಬ್ಬ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಮಾತನಾಡಿ, ಸಿಂಧನಕೇರಾ ಗ್ರಾಮಸ್ಥರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಆದಷ್ಟು ಬೇಗ ಗಮನ ಹರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಬೀದರ್ ಶಾಸಕ ರಹೀಮ್ ಖಾನ್, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ಹೊನ್ನನಾಯಕ್, ಮೀನುಗಾರಿಕೆ ಅಭಿವೃದ್ಧಿ ಅಧ್ಯಕ್ಷೆ ಮಾಲಾ ಬಿ. ನಾರಾಯಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

drainage projectHumnabad
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X