ಬೀದರ್ | ಪ್ರತಿಭಾವಂತ 40 ವಿದ್ಯಾರ್ಥಿಗಳಿಗೆ ಶಾಹೀನ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ : ಡಾ. ಅಬ್ದುಲ್ ಖದೀರ್

ಬೀದರ್ : ಎಸ್‍ಎಸ್‍ಎಲ್‍ಸಿ ದ್ವಿತೀಯ ಪೂರಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿ, ಸರ್ಕಾರಿ ವಸತಿ ನಿಲಯಗಳಲ್ಲಿ ಸೀಟು ಪಡೆದ ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ 40 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಉಚಿತ ಪಿಯು ಶಿಕ್ಷಣ ನೀಡಲಾಗುವುದು ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ತಿಳಿಸಿದ್ದಾರೆ.
ಶಿಕ್ಷಣ ಇಲಾಖೆಯ ಮೆರಿಟ್ ಪಟ್ಟಿ ಆಧಾರದಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಪ್ರಾತಿನಿಧ್ಯ ನೀಡಲಾಗುವುದು ಎಂದು ಅವರು ಹೇಳಿದರು.
ಹಿಂದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳಲ್ಲಿ ಉಚಿತ ಸೀಟುಗಳು ನೀಡಲಾಗಿತ್ತು. ಆವಾಗ ಶಾಹೀನ್ ಕಾಲೇಜಿನಲ್ಲಿ ಜಿಲ್ಲಾಡಳಿತ ಆಯ್ಕೆ ಮಾಡಿದ ವಿದ್ಯಾರ್ಥಿಗಳಿಗೆ ಉಚಿತ ಸೀಟುಗಳು ಕಲ್ಪಿಸಲಾಗಿತ್ತು. ಈಗಲೂ ಶಾಹೀನ್ ಶಿಕ್ಷಣ ಸಂಸ್ಥೆ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲು ಸಿದ್ಧವಿದೆ ಎಂದು ಅಬ್ದುಲ್ ಖದೀರ್ ತಿಳಿಸಿದ್ದಾರೆ.
Next Story





