Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಗೌತಮ ಬುದ್ಧರು ಜಗತ್ತಿಗೆ ಶಾಂತಿ,...

ಗೌತಮ ಬುದ್ಧರು ಜಗತ್ತಿಗೆ ಶಾಂತಿ, ಸಮಾನತೆ, ಸರಳತೆಯ ಸಂದೇಶ ನೀಡಿದ್ದಾರೆ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ12 May 2025 6:02 PM IST
share
ಗೌತಮ ಬುದ್ಧರು ಜಗತ್ತಿಗೆ ಶಾಂತಿ, ಸಮಾನತೆ, ಸರಳತೆಯ ಸಂದೇಶ ನೀಡಿದ್ದಾರೆ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಗೌತಮ ಬುದ್ಧರು ಜಗತ್ತಿಗೆ ಶಾಂತಿ, ಸಮಾನತೆ ಹಾಗೂ ಸರಳತೆಯ ಸಂದೇಶ ನೀಡಿದ್ದಾರೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಭಗವಾನ್ ಬುದ್ಧ ಜಯಂತ್ಯೋತ್ಸವ ಅಂಗವಾಗಿ ಭಗವಾನ್ ಬುದ್ಧ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಮೌಢ್ಯತೆ, ಅಸಮಾನತೆ, ದೌರ್ಜನ್ಯ ಮುಂತಾದ ಅನೇಕ ಅನಿಷ್ಟ ಪದ್ಧತಿಗಳು ಆಚರಣೆಯಲ್ಲಿದ್ದವು. ಇಂತಹ ಅನಿಷ್ಟ ಪದ್ಧತಿ ವಿರುದ್ಧವಾಗಿ ಬುದ್ಧ ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಸಮಾನತೆ, ಪ್ರೀತಿ ವಿಶ್ವಾಸಗಳನ್ನು ಮೂಡಿಸಿದರು. ರಾಜಮನೆತನದಲ್ಲಿ ಹುಟ್ಟಿದರು ಕೂಡ ಸರ್ವ ತ್ಯಾಗ ಮಾಡಿ, ಬೋಧಿವೃಕ್ಷದ ಕೆಳಗೆ ತಪಸ್ಸು ಮಾಡಿ ಜ್ಞಾನ ಪಡೆದರು. ದೇಶದ ಹಲವೆಡೆ ಸಂಚಾರ ಕೈಗೊಂಡು ತಮ್ಮ ತತ್ವಗಳನ್ನು ಬೋಧಿಸಿದರು. ಆಸೆ ದುಃಖಕ್ಕೆ ಮೂಲ ಕಾರಣವಾಗಿದೆ. ಆಸೆ ಬೀಡುವುದರಿಂದ ದುಃಖ ಕಡಿಮೆಯಾಗುತ್ತದೆ ಹಾಗೂ ಆಸೆ ಹೋಗಬೇಕೆಂದರೆ ಅಷ್ಟಾಂಗ ಮಾರ್ಗ ಪಾಲನೆ ಮಾಡಬೇಕು ಎಂದು ಬುದ್ಧ ತಿಳಿಸಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಗೌತಮ ಬುದ್ಧರ ಭಾವಚಿತ್ರದ ರಥ ಮೆರವಣಿಗೆಗೆ ಸಚಿವರು ಚಾಲನೆ ನೀಡಿದ ಸಂದರ್ಭದಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೇರಿದಂತೆ ಇತರರು ಸಾಕ್ಷಿಯಾದರು.

ರಥ ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳ ಮೂಲಕ ಹಾದು ಚನ್ನಬಸವ ಪಟ್ಟದೇವರು ರಂಗಮಂದಿರ ತಲುಪಿತು. ರಂಗಮಂದಿರದ ವೇದಿಕೆ ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಗವಾನ್ ಬುದ್ಧರು ಸಮಾಜದಲ್ಲಿ ಜನರು ಮಾನವೀಯತೆ, ಸಮಾನತೆ, ಸಹಬಾಳ್ವೆಯಿಂದ ಬದುಕಲು ಮಾರ್ಗ ಹಾಕಿಕೊಟ್ಟಿದ್ದಾರೆ ಎಂದು ತಿಳಿಸಿದರು.

ನಾವೆಲ್ಲರೂ ಸರಳತೆಯ ಜೀವನ ಅನುಸರಿಸಬೇಕು. ಪ್ರೀತಿ ವಿಶ್ವಾಸದಿಂದ ಕೂಡಿ ಬಾಳಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರ ಮಾರ್ಗದಲ್ಲಿ ನಡೆದು ಉತ್ತಮವಾದ ಸಮಾಜವನ್ನು ಕಟ್ಟಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪೂಜ್ಯ ಭಂತೆ ಅಶೋಕ್, ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠ್ಠಲದಾಸ್ ಪ್ಯಾಗೆ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಅಪರ್ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ, ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ವಿಜಯಕುಮಾರ್ ಸೊನಾರೆ, ಮಾರುತಿ ಬೌದ್ಧೆ, ಅನೀಲ್ ಬೆಲ್ದಾರ್, ಬಾಬು ಪಾಸ್ವಾನ್, ಕಾಶಿನಾಥ್ ಚೆಲ್ವಾ,ರಾಜಪ್ಪ ಗೂನ್ನಳ್ಳಿ, ತಾನಾಜಿ ಸಗರ್, ಶಿವಶರಣಪ್ಪ ಹುಗ್ಗೆ ಪಾಟೀಲ್, ಓಂ ಪ್ರಕಾಶ್ ರೊಟ್ಟೆ ಹಾಗೂ ಚಕ್ರಧರ ಹೊಸಳ್ಳಿ ಸೇರಿದಂತೆ ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X