Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಘಾಟಬೋರಳ್ ಗ್ರಾಮದಲ್ಲಿ ಮಂಗ...

Bidar | ಘಾಟಬೋರಳ್ ಗ್ರಾಮದಲ್ಲಿ ಮಂಗ ದಾಳಿ: 25 ಜನರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ31 May 2026 9:43 PM IST
share
Bidar | ಘಾಟಬೋರಳ್ ಗ್ರಾಮದಲ್ಲಿ ಮಂಗ ದಾಳಿ: 25 ಜನರಿಗೆ ಗಾಯ

ಹುಮನಾಬಾದ್: ತಾಲೂಕಿನ ಘಾಟಬೋರಳ್ ಗ್ರಾಮದಲ್ಲಿ ಸುಮಾರು ದಿನಗಳಿಂದ ಮಂಗ ಒಂದು ಮನುಷ್ಯರ ಮೇಲೆ ನಿರಂತರ ದಾಳಿ ಮಾಡಿ ಕಚ್ಚುತ್ತಿದ್ದು, ಇಲ್ಲಿವರೆಗೆ ಸುಮಾರು 15ರಿಂದ 20ಜನರನ್ನು ಕಚ್ಚಿದೆ.

ಮಂಗ ದಾಳಿಯಿಂದಾಗಿ ಭಯಭಿತರಾದ ಜನ ಸ್ಥಳೀಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ತಹಸೀಲ್ದಾರ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೆ, ಸಮಯಕ್ಕೆ ಮಂಗ ಸೆರೆ ಹಿಡಿಯುವ ಕಾರ್ಯಾಚರಣೆ ನಡೆದಿಲ್ಲ. ರವಿವಾರ ಮತ್ತೆ ಗ್ರಾಮದ ಐದು ಜನರಿಗೆ ಮಂಗ ಕಚ್ಚಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ ಎಂದು ತಿಳಿದು ಬಂದಿದೆ.

ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಂಗ ಹಿಡಿಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮಂಗವು ಹೊಲ ಗದ್ದೆಗಳಲ್ಲಿ ಓಡಾಡುತ್ತಿರುವುದರಿಂದ ಹಿಡಿಯಲು ಆಗಲಿಲ್ಲ. ಇದೀಗ ಬೀದರ್ ನಿಂದ ತಂಡ ಕೂಡ ಕಾರ್ಯಾಚರಣೆಗೆ ಬಂದಿದ್ದು, ಮಂಗ ಹಿಡಿಯುವ ಕಾರ್ಯಾಚರಣೆ ಮುಂದುವರೆದಿದೆ. ಮಂಗ ಕಡಿತಕ್ಕೋಳಗಾದ ಜನರು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಮಂಗವು ಗ್ರಾಮದ ಹಲವರನ್ನು ಕಚ್ಚಿದ್ದರಿಂದ ನಮ್ಮಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಮಕ್ಕಳನ್ನು ಸೇರಿದಂತೆ ಹಿರಿಯರಿಗೂ ಕೂಡ ಕಚ್ಚಿದೆ. ಮಂಗ ಹುಚ್ಚಾಗಿದೆಯೋ ಅಥವಾ ಒಂಟಿತನದಿಂದ ಸಿಟ್ಟಿಗೆ ಬಂದು ಜನರ ಮೇಲೆ ದಾಳಿ ಮಾಡುತ್ತಿದೆಯೋ ಗೊತ್ತಿಲ್ಲ. ಆದಷ್ಟು ಬೇಗ ಮಂಗ ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥ ಶಿವಕುಮಾರ್ ಸಾಕ್ರೆ ಅವರು ಆಗ್ರಹಿಸಿದ್ದಾರೆ.

ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ಮುಂದುವರೆಸಿ ಮಂಗ ಸೆರೆ ಹಿಡಿದಿದ್ದರೆ ಇಷ್ಟು ಜನರ ಮೇಲೆ ದಾಳಿ ಆಗುತ್ತಿರಲಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ವಾರದಿಂದ ಮಂಗನ ಭಯದಲ್ಲಿ ನಾವು ಬದುಕುತ್ತಿದ್ದೇವೆ. ವಾರದಲ್ಲೇ 25ಜನರಿಗೆ ಮಂಗ ಕಚ್ಚಿದೆ. ನಾವು ಪಿಡಿಒ, ತಹಸೀಲ್ದಾರ್, ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದರೂ ಕೂಡ ಮಂಗ ಹಿಡಿಯುವ ಕಾರ್ಯಾಚರಣೆಗೆ ಅವರು ಮುಂದಾಗಿಲ್ಲ. ರವಿವಾರದಂದು ತಂಡ ಬಂದು ಕಾರ್ಯಾಚರಣೆ ಮಾಡುತ್ತಿದ್ದಾರೆ. ಈಗಲಾದರೂ ಮಂಗ ಸೆರೆ ಹಿಡಿಯಲಿ.

- ತಾನಾಜಿ ಭೋಸಲೇ, ಗ್ರಾಮಸ್ಥ.


ಸುಮಾರು ಮೂರು ದಿನಗಳಿಂದ ನಾವು ಕಾರ್ಯಾಚರಣೆ ಮಾಡುತಿದ್ದೇವೆ. ಮಂಗ ಹೊಲ ಗದ್ದೆಗಳಲ್ಲಿ ಓಡಾಡುತ್ತಿರುವುದರಿಂದ ಮಂಗ ಹಿಡಿಯಲು ಆಗಲಿಲ್ಲ. ಇದೀಗ ಬೀದರ್ ನಿಂದ ತಂಡವು ಕೂಡ ಬಂದಿದ್ದು, ಕಾರ್ಯಾಚರಣೆ ಮುಂದುವರೆದಿದೆ.

- ರಾಜಶೇಖರ್ ಧೂಪದ್, ಅರಣ್ಯ ಅಧಿಕಾರಿ, ಹುಮನಾಬಾದ್.

Tags

Monkey attackGhataboralBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X