ಬೀದರ್ | ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗಿಟ್ಟೆ ಮಾಧವ ವಿಠ್ಠಲರಾವ್ ಅಧಿಕಾರ ಸ್ವೀಕಾರ

ಬೀದರ್ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗಿಟ್ಟೆ ಮಾಧವ ವಿಠ್ಠಲರಾವ್ ಅವರು ಸೋಮವಾರ ಮಧ್ಯಾಹ್ನ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ಅಧಿಕಾರ ವಹಿಸಿಕೊಂಡ ನಂತರ ಜಿಲ್ಲಾ ಪಂಚಾಯತ್ ಕಚೇರಿಯ ಎಲ್ಲಾ ಶಾಖೆಗಳಿಗೆ ಭೇಟಿ ನೀಡಿ, ಶಾಖೆಯ ಅಧಿಕಾರಿ ಸಿಬ್ಬಂದಿ ವರ್ಗದವರೊಂದಿಗೆ ಕೆಲಸದ ಕುರಿತು ಚರ್ಚಿಸಿ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಉಪ ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ ಮತ್ತು ಎಲ್ಲಾ ಶಾಖೆಯ ಅಧಿಕಾರಿ, ಸಿಬ್ಬಂದಿ ವರ್ಗದವರು ಇದ್ದರು.
Next Story




