ಗಡಿ ಭಾಗದ ಅಭಿವೃದ್ಧಿಗೆ ಸರಕಾರ ಸದಾ ಬದ್ಧ : ಸಚಿವ ಈಶ್ವರ್ ಖಂಡ್ರೆ
ಮದಕಟ್ಟಿಯ ಬುದ್ಧಪ್ರಿಯಾ ಪ್ರೌಢಶಾಲೆಯ ನೂತನ ವರ್ಗಕೋಣೆಗಳ ಉದ್ಘಾಟನೆ

ಬೀದರ್ : ಗಡಿ ಭಾಗದ ಅಭಿವೃದ್ಧಿಗಾಗಿ ಸರ್ಕಾರ ಸದಾ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.
ಭಾಲ್ಕಿ ತಾಲೂಕಿನ ಬಾಜೋಳಗಾ ಕ್ರಾಸ್ ಹತ್ತಿರದ ರಾಹುಲ್ ಶಿಕ್ಷಣ ಸಂಸ್ಥೆಯ ಬುದ್ಧಪ್ರಿಯಾ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ನೂತನ ವರ್ಗಕೋಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಾಕಷ್ಟು ಅನುದಾನ ನೀಡಿ, ಗಡಿ ಭಾಗದ ಶಾಲಾ, ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮದಕಟ್ಟಿಯ ಬುದ್ಧಪ್ರಿಯಾ ಪ್ರೌಢಶಾಲೆಯ ನೂತನ ವರ್ಗಕೋಣೆಗಳ ಕಟ್ಟಡಕ್ಕೆ ಅನುದಾನ ನೀಡಿ, ಇಲ್ಲಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ಗಡಿ ಭಾಗದ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಣದೂರಿನ ಭಂತೆ ಧಮ್ಮಾನಂದ್, ರಾಹುಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ತಿಪ್ಪಣ್ಣ ಶಿವಪೂರೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ ಸೋಮಣ್ಣಾ ಬೇವಿನಮರದ, ಎಸ್ಸಿ, ಎಸ್ಟಿ ಸಮನ್ವಯ ಸಮಿತಿಯ ಅಧ್ಯಕ್ಷ, ಪ್ರಾಂಶುಪಾಲ ಮಲ್ಲಿಕಾರ್ಜುನ್ ಕಾಂಬಳೆ, ತಹಸೀಲ್ದಾರ್ ಮಲ್ಲಿಕಾರ್ಜುನ್ ವಡ್ಡನಕೇರೆ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಬನ್ನಾಳೆ, ಕಸಾಪ ತಾಲೂಕು ಅಧ್ಯಕ್ಷ ನಾಗಭೂಷಣ ಮಾಮಡಿ, ಶಾಲೆಯ ಮುಖ್ಯ ಶಿಕ್ಷಕ ಸಂಜೀವಕುಮಾರ್ ಬಿರಾದಾರ್ ಹಾಗೂ ಗ್ರಾ.ಪಂ. ಅಧ್ಯಕ್ಷೆ ಪಾರ್ವತಿ ಲಿಂಗರಾಜ್ ಖಂಡಾಳೆ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







