Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಕನ್ನಡ ನಾಡು, ನುಡಿ ಸಂರಕ್ಷಣೆಗೆ ಸರಕಾರ...

ಕನ್ನಡ ನಾಡು, ನುಡಿ ಸಂರಕ್ಷಣೆಗೆ ಸರಕಾರ ಬದ್ಧವಾಗಿದೆ : ಸಚಿವ ಈಶ್ವರ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ1 Nov 2026 7:50 PM IST
share
ಕನ್ನಡ ನಾಡು, ನುಡಿ ಸಂರಕ್ಷಣೆಗೆ ಸರಕಾರ ಬದ್ಧವಾಗಿದೆ : ಸಚಿವ ಈಶ್ವರ್‌ ಖಂಡ್ರೆ

ಬೀದರ್‌ : ಕನ್ನಡ ಭಾಷೆ, ನಾಡು, ನುಡಿಯ ಸಂರಕ್ಷಣೆಯ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ, ಕೃಷಿ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಅವರು ಹೇಳಿದರು.

ನಗರದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 71ನೇ ಕನ್ನಡ ರಾಜ್ಯೋತ್ಸವದ ಧ್ವಜರೋಹಣ ನೆರವೆರಿಸಿ ಮಾತನಾಡಿದ ಅವರು, ಕನ್ನಡ ಕೇವಲ ಭಾಷೆಯಾಗದೆ ನಮ್ಮ ಉಸಿರು ಮತ್ತು ಬದುಕಾಗಬೇಕು. ಮಕ್ಕಳಲ್ಲಿ ಕನ್ನಡಾಭಿಮಾನ ಬೆಳೆಸುವುದರ ಜೊತೆಗೆ ಅನ್ಯಭಾಷಿಕರನ್ನೂ ಕನ್ನಡದ ಮುಖ್ಯವಾಹಿನಿಗೆ ತರಬೇಕು ಎಂದರು.

ಬಸವಕಲ್ಯಾಣದಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣವಾಗುತ್ತಿದ್ದು, ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ. 2027ರ ಮೇ ತಿಂಗಳ ಬಸವ ಜಯಂತಿಯ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. 770 ಅಮರಗಣಂಗಳ ಹೆಸರಿನಲ್ಲಿ 770 ಕಂಬಗಳನ್ನು ನಿರ್ಮಿಸಲಾಗುತ್ತಿದ್ದು, ರೋಬೋಟಿಕ್ ತಂತ್ರಜ್ಞಾನದ ಮೂಲಕ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ ಸೇರಿದಂತೆ 20 ಶರಣರ ಸಂಭಾಷಣೆಯ ಪ್ರಾತ್ಯಕ್ಷಿಕೆ ರೂಪಿಸಲಾಗುತ್ತಿದೆ. ಇಷ್ಟಲಿಂಗಪೂಜೆಯ ವೈಜ್ಞಾನಿಕ ಅನುಭವಕ್ಕೂ ಅವಕಾಶ ಕಲ್ಪಿಸಲಾಗಿದೆ. ಐಐಟಿ ಹೈದ್ರಾಬಾದ್ ಮತ್ತು ಐಐಟಿ ಖರಗಪೂರದ ನೆರವಿನಿಂದ ವೈದ್ಯಕೀಯ ಉಪಕರಣವೊಂದನ್ನು ವಿಶೇಷವಾಗಿ ರೂಪಿಸಲಾಗಿದ್ದು, ಅನುಭವ ಮಂಪಟಕ್ಕೆ ಬರುವ ಬಸವ ಭಕ್ತರಿಗೆ ಹಾಗೂ ಸಂದರ್ಶಕರಿಗೆ ವೈಜ್ಞಾನಿಕವಾಗಿ ಇಷ್ಟಲಿಂಗ ಪೂಜೆ ಮಾಡುವುದರಿಂದ ಮನಸ್ಸು, ಮೆದುಳು ಮತ್ತು ದೇಹದ ಮೇಲೆ ಆಗುವ ಪರಿಣಾಮದ ಸಾಕ್ಷಾತ್ ಅನುಭವ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಈ ಬಾರಿ ಎಲ್‌ನಿನೋ ಪ್ರಭಾವದಿಂದ ಮಳೆಯ ಪ್ರಮಾಣ ಕಡಿಮೆಯಾಗಿ ಭೀಕರ ಬರಗಾಲ ಉಂಟಾಗಿದೆ. ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಯಾವುದೇ ಗ್ರಾಮದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವ ತಲೆದೋರದಂತೆ ಕ್ರಮವಹಿಸಲು ಸೂಚಿಸಲಾಗಿದ್ದು, ರಾಜ್ಯದಲ್ಲಿ ಗ್ರಾಮೀಣ ಕುಡಿಯುವ ನೀರಿನ ನಿರ್ವಹಣೆಗಾಗಿ ಸರ್ಕಾರ ಇದುವರೆಗೆ ಒಟ್ಟು 306 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಪೈಕಿ ಬೀದರ ಜಿಲ್ಲೆಗೆ 11 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜನರಿಗೆ ಇರುವಲ್ಲಿಯೇ ಉದ್ಯೋಗ ನೀಡಿ ಗುಳೆ ಹೋಗುವುದನ್ನು ತಪ್ಪಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 3,175 ಕೋಟಿ ರೂ. ವೆಚ್ಚದಲ್ಲಿ 5,885 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 4,838 ಕಾಮಗಾರಿಗಳು ಪೂರ್ಣಗೊಂಡಿವೆ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 21 ಲಕ್ಷಕ್ಕೂ ಹೆಚ್ಚು ಮಾನವ ಉದ್ಯೋಗ ದಿನಗಳನ್ನು ಸೃಷ್ಟಿಸಲಾಗಿದ್ದು, 156 ಗ್ರಾಮ ಪಂಚಾಯಿತಿಗಳಲ್ಲಿ ಕೂಸಿನ ಮನೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ರಹೀಂ ಖಾನ್, ಡಾ. ಶೈಲೇಂದ್ರ ಬೆಲ್ದಾಳೆ, ಕರ್ನಾಟಕ ಮೀನುಗಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್, ವಿಧಾನ ಪರಿಷತ್‌ ಸದಸ್ಯ ಎಂ.ಜಿ ಮೂಳೆ, ಬುಡಾ ಅಧ್ಯಕ್ಷ ವಿನೋದ್‌ ಅಪ್ಪೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ್‌ ವಿಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಸಹಾಯಕ ಆಯುಕ್ತ ಅಭಿನವ್ ಜೈನ್, ಅಪರ್‌ ಜಿಲ್ಲಾಧಿಕಾರಿ ಸುರೇಖಾ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು, ಶಾಲಾ-ಕಾಲೇಜು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

Tags

GovernmentKannadaMinisterIshwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X