Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಗ್ಯಾರಂಟಿಗಳಿಂದ ಜನರಿಗೆ ದರ ಏರಿಕೆ ಹೊರೆ...

ಗ್ಯಾರಂಟಿಗಳಿಂದ ಜನರಿಗೆ ದರ ಏರಿಕೆ ಹೊರೆ ತಗ್ಗಿದೆ : ಸಚಿವ ಈಶ್ವರ್ ಖಂಡ್ರೆ

ಪ್ರಜಾಸೇವೆ ಆಂದೋಲನದಲ್ಲಿ ಜನರ ಅಹವಾಲು ಆಲಿಸಿದ ಸಚಿವರು; ಮೆಹಕರ್ ಅಭಿವೃದ್ಧಿಗೆ ಹಲವು ಭರವಸೆ

ವಾರ್ತಾಭಾರತಿವಾರ್ತಾಭಾರತಿ8 Sept 2026 5:36 PM IST
share
ಗ್ಯಾರಂಟಿಗಳಿಂದ ಜನರಿಗೆ ದರ ಏರಿಕೆ ಹೊರೆ ತಗ್ಗಿದೆ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡಿದ್ದರೂ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಜನರು ಆ ಹೊರೆ ತಡೆದುಕೊಳ್ಳಲು ಸಾಧ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಭಾಲ್ಕಿ ತಾಲೂಕಿನ ಮೆಹಕರ್ ಗ್ರಾಮದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು. ಆದರೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಜಾರಿ ಮಾಡಿದ್ದು, ಅಭಿವೃದ್ಧಿ ಕಾಮಗಾರಿಗಳನ್ನೂ ಮುಂದುವರಿಸಿದೆ. ಮೆಹಕರ್‌ನಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಸರ್ಕಾರಿ ಪ್ರಾಥಮಿಕ ಶಾಲೆಯ ನೂತನ ಕಟ್ಟಡವೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.

ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೆ ತಂದಿದೆ. ಗ್ಯಾರಂಟಿಗಳ ಜನಪ್ರಿಯತೆಯಿಂದ ಪ್ರತಿಪಕ್ಷಗಳು ಕಂಗೆಟ್ಟಿವೆ ಎಂದು ಅವರು ವಾಗ್ದಾಳಿ ನಡೆಸಿದರು.

ಬೀದರ್ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 3.64 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ 2,092.92 ಕೋಟಿ ರೂ., ಅನ್ನಭಾಗ್ಯ ಯೋಜನೆಯಡಿ 333.28 ಕೋಟಿ ರೂ., ಗೃಹಜ್ಯೋತಿ ಯೋಜನೆಯಡಿ 589.23 ಕೋಟಿ ರೂ. ಪಾವತಿಸಲಾಗಿದೆ. ಶಕ್ತಿ ಯೋಜನೆಯಡಿ 13.89 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ಯುವನಿಧಿ ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕರಿಗೆ 57.12 ಕೋಟಿ ರೂ. ನೆರವು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮೆಹಕರ್–ಭಾಲ್ಕಿ ರಸ್ತೆ ಅಭಿವೃದ್ಧಿಗೆ ಸಾಯಗಾಂವ್ ಮಾರ್ಗವಾಗಿ 5 ಕೋಟಿ ರೂ. ಮಂಜೂರು ಮಾಡಲಾಗಿದ್ದು, ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮೆಹಕರ್ ಅಭಿವೃದ್ಧಿಗೆ ನೀಡಿದ್ದ ಎಲ್ಲ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಪ್ರಜಾಸೇವೆ ಆಂದೋಲನದ ಮೂಲಕ ಪಿಂಚಣಿ, ವಸತಿ, ನಿವೇಶನ, ಪೋಡಿ, ಶಾಲೆ, ಅಂಗನವಾಡಿ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳಿಗೆ ಸಂಬಂಧಿಸಿದ ದೂರುಗಳನ್ನು ಸ್ಥಳದಲ್ಲೇ ಸ್ವೀಕರಿಸಿ ಪರಿಹರಿಸಲಾಗುತ್ತಿದೆ. ಪ್ರತಿ ತಿಂಗಳ ಎರಡನೇ ಶನಿವಾರ ಬೀದರ್ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆಗಳಿಗೆ ಮಧ್ಯವರ್ತಿಗಳಿಲ್ಲದೆ ಪರಿಹಾರ ಒದಗಿಸಲಾಗುವುದು ಎಂದರು.

ರಾಜ್ಯದಲ್ಲಿ ಎಲ್‌ನಿನೋ ಪರಿಣಾಮ ಮಳೆಯ ಕೊರತೆ ಉಂಟಾಗಿದ್ದು, ಈಗಾಗಲೇ 101 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಎರಡನೇ ಹಂತದಲ್ಲಿ ಭಾಲ್ಕಿ ತಾಲೂಕಿನನ್ನೂ ಬರಪೀಡಿತ ಪಟ್ಟಿಗೆ ಸೇರಿಸುವ ವಿಶ್ವಾಸವಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಕಾರ್ಯಕ್ರಮದಲ್ಲಿ ಮೆಹಕರ್ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ತಮ್ಮ ಅಹವಾಲುಗಳನ್ನು ಸಚಿವರ ಮುಂದಿಟ್ಟು, ಸಂಬಂಧಿತ ಅಧಿಕಾರಿಗಳಿಗೆ ಸ್ಥಳದಲ್ಲೇ ಸಮಸ್ಯೆ ಪರಿಹರಿಸುವಂತೆ ಸಚಿವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ. ರಂದೀಪ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ವಿಠ್ಠಲ್‌ ಮಾಧವರಾವ್, ಜಿಲ್ಲಾ ಪೊಲೀಸ್ ವರಿಷ್ಠಾಥಿಕಾರಿ ಪ್ರದೀಪ್ ಗುಂಟಿ, ಗ್ಯಾರಂಟಿ ಸಮಿತಿಯ ಜಿಲ್ಲಾಧ್ಯಕ್ಷ ಅಮೃತರಾವ್‌ ಚಿಮಕೋಡ್ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಹನುಮಂತರಾವ್ ಚವ್ಹಾಣ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Tags

Eshwar KhandreGuarantee Schemes
share
ವಾರ್ತಾಭಾರತಿ
ವಾರ್ತಾಭಾರತಿ
Next Story
X