ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಅನುಮತಿ ನೀಡದಿದ್ದರೆ ದಿಲ್ಲಿಯಲ್ಲಿ ಸತ್ಯಾಗ್ರಹ : ಗುರುನಾಥ್ ವಡ್ಡೆ ಎಚ್ಚರಿಕೆ

ಬೀದರ್ : ಬಸವಕಲ್ಯಾಣದಲ್ಲಿ ಜೂ. 28 ರಂದು ನಡೆಯಲಿರುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಅನುಮತಿ ನೀಡದಿದ್ದಲ್ಲಿ ಸರ್ಕಾರದ ಅಘೋಷಿತ ತುರ್ತು ಪರಿಸ್ಥಿತಿಯನ್ನು ಖಂಡಿಸಿ ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಸತ್ಯಾಗ್ರಹ ನಡೆಸುವುದಾಗಿ ಸಮಾಜ ಸೇವಕ ಗುರುನಾಥ್ ವಡ್ಡೆ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಶನಿವಾರ ಸಲ್ಲಿಸಿರುವ ಮನವಿಯಲ್ಲಿ, ಬಸವಕಲ್ಯಾಣ ತಾಲೂಕು ಆಡಳಿತವು ಸಮಾವೇಶಕ್ಕೆ ಅನುಮತಿ ನಿರಾಕರಿಸಿರುವುದು ಭಾರತೀಯ ಸಂವಿಧಾನದ ಅನುಚ್ಛೇದ 19(1)(ಎ), 19(1)(ಬಿ) ಹಾಗೂ 25(1)ರಲ್ಲಿ ನೀಡಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಸಮಾವೇಶಕ್ಕೆ ಅನುಮತಿ ನಿರಾಕರಿಸಿರುವ ಕ್ರಮವು ಪ್ರಜಾಪ್ರಭುತ್ವ ಮತ್ತು ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಈ ನಿರ್ಧಾರದ ಹಿಂದೆ ತಾಲೂಕು ಆಡಳಿತದ ದುರುದ್ದೇಶ ಅಡಗಿದೆ ಎಂದು ಅವರು ದೂರಿದ್ದಾರೆ.
Next Story




